ಕುಶಾಲನಗರ : ಕೊಡಗು ವಿಶ್ವವಿದ್ಯಾಲಯವನ್ನು ಸ್ವತಂತ್ರವಾಗಿ ಉಳಿಸಿ ಅಭಿವೃದ್ಧಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ಸಲಹೆ ಸೂಚನೆ ನೀಡುವ ಸಂಬಂಧ ಕೊಡಗು ಜಿಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದ ಮೂಲಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಿಗೆ ಮನವಿ ಪತ್ರ ನೀಡಲಾಯಿತು.
ಈ ಸಂದರ್ಭ ಪ್ರತಿಕ್ರಿಯಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ಶ್ರೀಮತಿ ವಿಜಯ ಭಾರತಿ ಸಯಾನಿ ಮತ್ತು ಮಾಜಿ ಸದಸ್ಯರಾದ ರಾಜೀವ್ ಜೈನ್ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು.
ವಿವಿ ಹಿತ ರಕ್ಷಣಾ ಸಮಿತಿ, ಪ್ರಮುಖ ಸಂಘ ಸಂಸ್ಥೆಗಳಾದ ಕರ್ನಾಟಕ ರಕ್ಷಣಾ ವೇದಿಕೆ, ಕುಶಾಲನಗರ ಗೌಡ ಸಮಾಜ, ಕಾವೇರಿ ಮೀಡಿಯಾ ನೆಟ್ವರ್ಕ್, ಕಾವೇರಿ ಆರತಿ ಬಳಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ತಾಲೂಕು ಸೌಂದರ್ಯ ತಜ್ಞರ ವೇದಿಕೆ, ರಾಷ್ಟ್ರೀಯ ಮಕ್ಕಳ ಸಾಹಿತ್ಯ ವೇದಿಕೆ, ವಿವಿ ಬೋಧಕ ಬೋಧಕೇತರ ಸಿಬ್ಬಂದಿ, ಸ್ಥಳೀಯ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
