ನಾಪೋಕ್ಲು : ಪಡಿಯಾಣಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳು ಟಿವಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ಹಳೆ ವಿದ್ಯಾರ್ಥಿಗಳು ಸೇರಿ ಹಣ ಕ್ರೋಢೀಕರಿಸಿ ಟಿವಿಯನ್ನು ನೀಡಿದ್ದಾರೆ. ಹಳೆ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಶಿಕ್ಷಕರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಾಲೆಯ ಪರವಾಗಿ ಮುಖ್ಯ ಶಿಕ್ಷಕ ಕೆ.ಸಿ. ದಮೇಂದ್ರ ಅವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕಿಯರಾದ ಶ್ರೀಮತಿ ಎಂ.ಬಿ. ಭಾರತಿ, ಕೆ.ಎ. ಹೇಮಾಮಾಲಿನಿ, ಕೆ.ಜೆ. ರಾಧಾ ಹಾಜರಿದ್ದರು.
