ವೀರಾಜಪೇಟೆ : ಕೊಡಗು ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯ ಸಿಂಚನವಾಗುತ್ತಿದೆ. ಆದ್ರೆ ಈ ನಡುವೆ ಅಲ್ಲಲ್ಲಿ ಕಾಳ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಬಿಸಿಲಿನ ಬೇಗೆಯ ಮಧ್ಯೆ ಆತಂಕ ಹೆಚ್ಚಿಸುತ್ತಿದೆ.
ವಿರಾಜಪೇಟೆಯಲ್ಲಿ ಇಂದು ಮತ್ತೆ ಬೆಂಕಿ ಹೊತ್ತಿಕೊಂಡಿದೆ. ನೆಹರು ನಗರ ಬಳಿಯ ಕಾಡಿನಲ್ಲಿ ಬೆಂಕಿ ಕಾಣಿಸಿದ್ದು, ದಟ್ಟ ಹೊಗೆ ಆವರಿಸಿದೆ. ಅಕ್ಕಪಕ್ಕದಲ್ಲಿ ಮನೆಗಳಿದ್ದು, ಬೆಂಕಿ ವ್ಯಾಪಿಸಿದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ಅರಿತ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
