ಸಚಿವರಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಗತಿ ಪರಿಶೀಲನಾ ಸಭೆ – ಜಿಲ್ಲೆಯಲ್ಲಿ ಕಾರ್ಡಿಯಾಲಜಿ ಸೆಂಟರ್‌ ಆರಂಭ..?

Share this post :

coorg buzz

ಬೆಂಗಳೂರು : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಾಲೇಜಿನ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ನಡೆಯಿತು. ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟಿಲ್ ಕಾಲೇಜಿನ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಕಾಲೇಜಿನಲ್ಲಿ ಖಾಲಿಯಿರುವ ನರ್ಸಿಂಗ್ ಆಫಿಸರ‍್ಸ್ ಮತ್ತು ವೈದ್ಯರ ಹುದ್ದೆಯನ್ನು ಆದಷ್ಟು ಶೀಘ್ರದಲ್ಲಿ ಭರ್ತಿ ಮಾಡುವಂತೆ ಸಚಿವರು ಸೂಚಿಸಿದರು. ಕಾರ್ಡಿಯಾಲಜಿ ಕೇಂದ್ರ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು. ಈ ಬಗ್ಗೆ ಶಾಸಕ ಡಾ. ಮಂಥರ್ ಗೌಡ ಹಾಗೂ ಅಧೀಕ್ಷಕ ಡಾ. ಲೋಕೇಶ್ ಅವರೊಂದಿಗೆ ಸಚಿವರು ಸಮಾಲೋಚನೆ ನಡೆಸಿದರು. ಮೆಡಿಕಲ್ ಕಾಲೇಜಿನ ನೂತನ ಕಟ್ಟಡದ ಕಾಮಗಾರಿಯ ಟೆಂಡರ್ ಕರೆಯುವಂತೆ ಸಚಿವರು ಸೂಚನೆ ನೀಡಿದರು.