ಕುಶಾಲನಗರ : ಸ್ಮಶಾನ ಜಾಗದಲ್ಲಿ ಗಾಂಜಾ ಗಿಡ ಬೆಳೆಸಿದ್ದ ವ್ಯಕ್ತಿಯೊಬ್ಬನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಹೇರೂರು ಗ್ರಾಮದ ಪ್ರಶಾಂತ್(29) ಬಂಧಿತ ಆರೋಪಿ.
ಕುಶಾಲನಗರ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನ ಜಾಗದಲ್ಲಿ ಈತ ಗಾಂಜಾ ಗಿಡಗಳನ್ನು ಬೆಳೆದಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಈತನಿಂದ 1 ಕೆ.ಜಿ. 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಡಿ.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಪಕ ಬಿ.ಜಿ. ಪ್ರಕಾಶ್, ಕುಶಾಲನಗರ ಟೌನ್ ಸಬ್ ಇನ್ಸ್ಪೆಕ್ಟರ್ ಗೀತಾ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
