ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ FMC ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಖಂಡನೆ

ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಡಗು ಜಿಲ್ಲೆಯಲ್ಲಿ ತನ್ನದೇ ಆದ ವಿಶ್ವವಿದ್ಯಾಲಯವನ್ನು ಹಲವು ವರ್ಷಗಳ ನಂತರ ಪಡೆದು ಅದು ಬೆಳವಣಿಗೆಯ ಗತಿಯಲ್ಲಿ ಫಲಾನುಭವಿಗಳಿಗೆ ತಲುಪುತ್ತಿರುವ ಸಮಯದಲ್ಲಿ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ, ವಿಲೀನಗೊಳಿಸುವ ಪ್ರಸ್ತಾವನೆಯನ್ನು ಸರಕಾರವು ಮುಂದಿಟ್ಟಿರುವುದನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ, ಕಾರ್ಯಪ್ಪ ಹಳೇ ವಿದ್ಯಾರ್ಥಿ ಸಂಘ ಉಗ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಗತ್ತಿನ ಯಾವುದೇ ದೇಶದಲ್ಲಿ ಹಣಕಾಸಿನ ಕ್ಷುಲ್ಲಕ ಕಾರಣ ನೀಡಿ ಸರ್ಕಾರಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿದ ನಿದರ್ಶನಗಳು […]