ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್‌ಎಸ್‌ಎಸ್‌ ಶಿಬಿರ ಉದ್ಘಾಟನಾ ಕಾರ್ಯಕ್ರಮ

St Annes College Virajpet NSS Camp

ಯಾವುದೇ ಫಲಾಪೆಕ್ಷೆ ಇಲ್ಲದೆ ಮಾಡುವ ನಿಶ್ವಾರ್ಥ ಸೇವೆಯು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಚ್ಚಪಂಡ ಮಹೇಶ್ ಗಣಪತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ ಕೊಡಗು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ ವತಿಯಿಂದ ಬೇಟೋಳಿ ಗ್ರಾಮ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ 2024-25 ನೇ ಸಾಲೀನ ವಾರ್ಷಿಕ ಶಿಭಿರದ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಶಿಬಿರವನ್ನು ಹೂ ಗಿಡಕ್ಕೆ ನೀರು ಎರೆಯುವ […]

ವಾಣಿಜ್ಯ ವಾಹನಗಳ ಕಾರ್ಯಕ್ಷಮತೆ ಹೆಚ್ಚಿಸಲು ಬಂತು ಹೊಸ ಫ್ಲೂಯಿಡ್

HPCL, Tata Motors

ಬೆಂಗಳೂರು: ಭಾರತದ ತೈಲ ಕಂಪನಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಮತ್ತು ದೇಶದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಸಂಸ್ಥೆಯಾಗಿರುವ ಟಾಟಾ ಮೋಟಾರ್ಸ್ (Tata Motors) ಜಂಟಿಯಾಗಿ ಸಂಸ್ಥಾಪನೆ ಮಾಡಿರುವ ಜೆನ್ಯೂನ್ ಡೀಸೆಲ್ ಎಕ್ಸಾಸ್ಟ್ ಫ್ಲೂಯಿಡ್ (ಡಿಇಎಫ್) ಬ್ರಾಂಡ್ ಅನ್ನು ಬಿಡುಗಡೆ ಮಾಡಿದೆ. ಈ ಅತ್ಯುತ್ತಮ ಗುಣಮಟ್ಟದ ಡಿಇಎಫ್ ಉತ್ಪನ್ನವು ವಾಹನಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲಿದ್ದು, ಡ್ರೈವ್‌ ಟ್ರೇನ್ ದಕ್ಷತೆಯನ್ನು ಉತ್ತಮಗೊಳಿಸುತ್ತದೆ ಮತ್ತು ವಾಹನದ ಆಯುಷ್ಯವನ್ನು ಜಾಸ್ತಿ ಮಾಡುತ್ತದೆ. ಉದ್ಯಮದ ಉನ್ನತ ಮಾನದಂಡಗಳನ್ನು ಪೂರೈಸುವ ಬಿಐಎಸ್- ಪ್ರಮಾಣೀಕೃತ […]

Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಕಾವೇರಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಪೊನ್ನಣ್ಣ ಮನವಿ

A S Ponnanna

1968ರಲ್ಲಿ ಪ್ರಾರಂಭವಾಗಿ ಸುಮಾರು 55 ವರ್ಷಗಳಿಂದ ಕಾವೇರಿ ಪದವಿ ಪೂರ್ವ ಕಾಲೇಜು ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು ವಿರಾಜ್ ಪೇಟೆಯಲ್ಲಿ ಎರಡು ಸಂಸ್ಥೆಗಳು ಉತ್ತಮ ಫಲಿತಾಂಶ, ಗುಣಮಟ್ಟದ ಶಿಕ್ಷಣ ಸಾಧನೆ ಮೂಲ ಸೌಕರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಸ್ಥಾನ ಗುರುತಿಸಿಕೊಂಡಿದೆ. 20 ವರ್ಷಗಳ ಹಿಂದೆ ಸರ್ಕಾರದ ಆದೇಶದಂತೆ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜುಗಳನ್ನು ಬೇರ್ಪಡಿಸಿದಾಗ ಪಿಯು ಕಾಲೇಜು ಸಿಬ್ಬಂದಿಗಳು ಪೂರ್ಣಪ್ರಮಾಣದಲ್ಲಿ ಅನುದಾನಕ್ಕೆ ಒಳಪಡಬೇಕಾಗಿತ್ತು. ಆದರೆ ಆಗಲಿಲ್ಲ ಹಾಗಾಗಿ ಈ ಎರಡು ಕಾಲೇಜು ಸಂಸ್ಥೆಗಳನ್ನು ವಿಶೇಷ ಪ್ರಕರಣವೆಂದು […]