ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಅನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ […]
ಮಡಿಕೇರಿ ನಗರ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ

ಮಡಿಕೇರಿ (Madikeri) ನಗರ ಠಾಣೆಯಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ (General Thimmaiah Public School) ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ನಡೆಸಿದ್ದು ಠಾಣೆಗೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ ಠಾಣೆಯ ಬಗ್ಗೆ, ಪೊಲೀಸ್ ಸೇವೆಗಳ ಬಗ್ಗೆ, ಮಕ್ಕಳ ಕಾನೂನು, ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮಗಳು ಮುಂತಾದವ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊಡಗು ಜಿಲ್ಲಾ ಬಿಜೆಪಿ ಅಹೋರಾತ್ರಿ ಧರಣಿ

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಬಾರದು, ಪರಿಶಿಷ್ಟ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆಡೆಗೆ ಬಳಸದಿರಿ, ಕಾಫಿ ಉತ್ಪಾದನೆ ಕುಂಠಿತವಾಗಿದ್ದು ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯ ಹಳೆಯ ಖಾಸಗಿ ಬಸ್‌ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ಪ್ರಾರಂಭಿಸಿದೆ. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮಾರ್ಚ್ 11ರಂದು ಕೊಡಗು ಜಿಲ್ಲಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಬಿಜೆಪಿ ಹೇಳಿದೆ. ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚದೇ ಉಳಿಸಬೇಕು, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ […]
ಪೊಲೀಸ್ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಮಾ.09 ರಂದು ಮ್ಯಾರಥಾನ್

ಪೊಲೀಸ್ ಇಲಾಖೆ ವತಿಯಿಂದ ‘ಫಿಟ್‍ನೆಸ್ ಫಾರ್ ಆಲ್’ ಎಂಬ ಧ್ಯೇಯದೊಂದಿಗೆ ಸಮಾಜದ ಆರೋಗ್ಯ ಕಾಪಾಡುವ ಸಂದೇಶದೊಂದಿಗೆ ಹಾಗೂ ಮಾದಕ ಮುಕ್ತ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲು ‘ಕರ್ನಾಟಕ ರಾಜ್ಯ ಪೊಲೀಸ್’ ಇಲಾಖಾ ವತಿಯಿಂದ ಮಾರ್ಚ್ 9 ರಂದು ಮ್ಯಾರಥಾನ್ (Marathon) ಓಟ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕೇಂದ್ರಸ್ಥಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ಮಾರ್ಚ್ 9 ರಂದು ಬೆಳಗ್ಗೆ 8 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಪ್ರಾರಂಭಿಸಿ ನಗರದ […]