ಕಣ್ಣಿನ ಆರೋಗ್ಯ: ಗ್ಲಾಕೋಮಾ ಬಗ್ಗೆ ಇರಲಿ ಎಚ್ಚರ

ಗ್ಲಾಕೋಮವನ್ನು (Glaucoma) ಸದ್ದಿಲ್ಲದೇ ದೃಷ್ಟಿ ಕದ್ದೊಯ್ಯುವ ಕಳ್ಳ ಎಂದು ಕರೆಯ ಬಹುದು. ಗ್ಲಾಕೋಮಾ ಕಣ್ಣಿಗೆ ಸಂಬಂಧ ಪಟ್ಟ ಆತಂಕಕಾರಿ ಕಾಯಿಲೆಯ ಸ್ಥಿತಿಗಳಲ್ಲೊಂದು. ಇದರಿಂದ ಕಣ್ಣಿನ ದೃಷ್ಟಿ ಹೋಗುತ್ತದೆ. ಸಾಧಾರಣವಾಗಿ 40 ವರ್ಷಗಳಿಗಿಂತಲೂ ಹೆಚ್ಚಿನ ವಯಸ್ಸಿನವರಿಗೆ, ಅದರಲ್ಲೂ ಅನುವಂಶಿಕವಾಗಿ ಗ್ಲಾಕೋಮಾ ರೋಗವು ಹರಡುವುದು ಕಂಡು ಬರುತ್ತದೆ. ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಕಾಯಿಲೆ ಗ್ಲಾಕೋಮಾ ರೋಗ ಲಕ್ಷಣಗಳು: ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಠಿ ಕದಿಯುವ ಕಾಯಿಲೆ ಗ್ಲಾಕೋಮಾ, 40 ವಯಸ್ಸಿನ ನಂತರ ಪ್ರತೀಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ಒತ್ತಡ […]
ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮ

ವೀರಶೈವ ಪರಂಪರೆಯನ್ನು ಪಸರಿಸುವಲ್ಲಿ ಶ್ರೀ ರೇಣುಕಾಚರ‍್ಯರ ಪಾತ್ರ ಮಹತ್ತರವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ನಗರದ ಗಾಂಧಿ ಭವನದಲ್ಲಿ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮಕ್ಕೆ (Renukacharya Jayanti) ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರದ ಸನಾತನ ಸಂಸ್ಕೃತಿಯಲ್ಲಿ ದ್ವೈತ, ಅದ್ವೈತ, ವಿಶಿಷ್ಟ ಅದ್ವೈತ ಎಂಬ ಸಿದ್ಧಾಂತಗಳು ಪ್ರಚಲಿತದಲ್ಲಿದ್ದು, ಇತಿಹಾಸದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿದೆ. ಜಾತಿ, ಮತ, ಭಾಷೆ, ಪ್ರದೇಶ ಎಂಬ ಸಂಕುಚಿತ […]
ಯುವ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಯುವ (Youth) ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಸ್ಪಂದನ ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆ ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ […]
ನೋಂದಣಿ ಆಗದಿರುವ ಹೋಂಸ್ಟೇ ಹೆಸರು ನೋಂದಾಯಿಸಿ: ವೆಂಕಟ್ ರಾಜಾ

ಜಿಲ್ಲೆಯ ಪ್ರವಾಸಿ ಸ್ಥಳ, ಹೋಂಸ್ಟೇ (Homestay) ಹಾಗೂ ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆ ಪ್ರವಾಸಿಗರ ಸುರಕ್ಷತೆ ಮತ್ತು ರಕ್ಷಣೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇದುವರೆಗೆ ನೋಂದಣಿ ಆಗದಿರುವ ಹೋಂಸ್ಟೇಗಳು ಕಡ್ಡಾಯವಾಗಿ ನೋಂದಣಿ ಆಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆ ನಿರ್ವಹಿಸುವ ಕುರಿತು ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ-ಸ್ಟೇ ಹಾಗೂ ಟ್ರಾವೆಲ್ಸ್ ಏಜೆನ್ಸಿ ಸಂಸ್ಥೆಯ ಪ್ರತಿನಿಧಿಗಳ ಜತೆ ಬುಧವಾರ ನಡೆದ […]
ಕೊಡಗಿನ ಹಲವೆಡೆ ಲಘು ಭೂಕಂಪನ ಅನುಭವ!

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬಳಿ ಮಂಗಳವಾರ ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ. ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ. ಮಡಿಕೇರಿಯ (Madikeri) ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 1.6 ಮ್ಯಾಗ್ನಿಟ್ಯೂಡ್ ತೀವ್ರತೆಯ ಭೂಕಂಪ ಬೆಳಿಗ್ಗೆ ಗಂಟೆ 10:49:05 ಕ್ಕೆ ಸಂಭವಿಸಿದೆ. ಭೂಕಂಪ ಆಗಲು ಬೇರೆ ಬೇರೆ ಕಾರಣಗಳಿವೆ. ಭೂಕಂಪಗಳನ್ನು […]
ಕಾರ್ಯಗಾರ: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಹಾಗೂ ಮಹಿಳಾ (Women) ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದೊಂದಿಗೆ 2024-25ನೇ ಸಾಲಿನ “ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ನಿಯಮ-2006ರ ಅನುಷ್ಟಾನದಲ್ಲಿ ಭಗಿದಾರ ಇಲಾಖೆಗಳ ಪಾತ್ರ ಕುರಿತು ಎರಡು ದಿನಗಳ ಓರಿಯಂಟೇಷನ್ ತರಬೇತಿ ಕಾರ್ಯಗಾರ (Workshop) ವನ್ನು ಮಡಿಕೇರಿ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ […]