Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮಡಿಕೇರಿ (Madikeri) 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ.
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ […]
ಅರ್ಜಿ ಆಹ್ವಾನ: ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್

ಐಐಎಸ್‍ಸಿ, ಐಐಟಿ ಮತ್ತು ಎನ್‍ಐಟಿ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇಂಟಲಿಜೆನ್ಸ್ (Artificial Intelligence) ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಎಂಜಿನಿಯರಿಂಗ್ ಪದವೀಧರರಿಗೆ ರೂ.15 ಸಾವಿರಗಳ ಶಿಷ್ಯವೇತನ/ ತರಬೇತಿ ನೀಡುವ ಸಂಬಂಧ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಚಿಸುವವರು ಏಪ್ರಿಲ್, 25 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ 9632465161. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, […]