ಮುದ್ದಂಡ ಹಾಕಿ ನಮ್ಮೆ: ಬೆಳ್ಳಿ ಹಬ್ಬದ ಪ್ರಶಸ್ತಿಗಾಗಿ ಮಂಡೇಪಂಡ Vs ಚೇಂದಂಡ ನಡುವೆ ಹಣಾಹಣಿ

ಮಡಿಕೇರಿ : ಹದಿನಾಲ್ಕರ ಹರೆಯದ ಪೋರ, ಗೋಲ್ ಕೀಪರ್ ಮಂಡೇಪಂಡ ದ್ಯಾನ್ ಬೆಳ್ಯಪ್ಪ ಅವರ ಅತ್ಯಮೋಘ ಆಟದ ಪ್ರದರ್ಶನದಿಂದ ಮಂಡೇಪಂಡ ಕೊಡವ ಕೌಟುಂಬಿಕ ಮುದ್ದಂಡ (Muddanda) ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪ್ರವೇಶಿಸಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪ್ರಶಸ್ತಿಗಾಗಿ 3 ಬಾರಿಯ ಛಾಂಪಿಯನ್ ಬಲಿಷ್ಠ ಚೇಂದಂಡ ತಂಡವನ್ನು ಎದುರಿಸಲಿದೆ. ‘ಶೂಟೌಟ್’ನಲ್ಲಿ ಎದುರಾಳಿ, ಮೂರು ಬಾರಿಯ ಕೌಟುಂಬಿಕ ಹಾಕಿ ಪಂದ್ಯಾವಳಿ ಛಾಂಪಿಯನ್ ನೆಲ್ಲಮಕ್ಕಡ ತಂಡದ ಎರಡು ಗೋಲಿನ ಅವಕಾಶಗಳನ್ನು ಗೋಲಿ ಮಂಡೇಪಂಡ ಡ್ಯಾನ್ ಬೆಳ್ಯಪ್ಪ ವಿಫಲಗೊಳಿಸುತ್ತಿರುವಂತೆಯೇ ಮಂಡೇಪಂಡ […]
ಮುದ್ದಂಡ ಹಾಕಿ ನಮ್ಮೆ : ಮಹಿಳಾ ಹಾಕಿಯಲ್ಲಿ ಚೊಚ್ಚಲ ಚಾಂಪಿಯನ್ ಆದ ಕಂಬೀರಂಡ ಚಾಂಪಿಯನ್

ಮಡಿಕೇರಿ : ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ಇದೇ ಮೊದಲ ಬಾರಿಗೆ ಮುದ್ದಂಡ (Muddanda) ಕಪ್ ಹಾಕಿ ಉತ್ಸವದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಹಾಕಿ ಪಂದ್ಯಾವಳಿಯ ಫೈನಲ್ಸ್ನಲ್ಲಿ ಕಂಬೀರಂಡ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನ ಸಂಖ್ಯೆ ೨ರಲ್ಲಿ ಕಂಬೀರಂಡ ಮತ್ತು ಕೇಚೆಟ್ಟಿರ ತಂಡಗಳ ನಡುವೆ ನಡೆದ ರೋಚಕ ಅಂತಿಮ ಪಂದ್ಯಾವಳಿಯಲ್ಲಿ ನಿಗದಿತ ಅವಧಿಯಲ್ಲಿ ಎರಡೂ ತಂಡಗಳು ತಲಾ ಎರಡು ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ […]
ಭದ್ರತೆ ನೀಡಲು ಕೇಂದ್ರ ವಿಫಲ: ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ

ಮಡಿಕೇರಿ : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ದೇಶದ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಮ್ ಆದ್ಮಿ ಪಾರ್ಟಿಯ (Aam Aadmi Party) ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಒತ್ತಾಯಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿರುವ ದಾಳಿಯನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಅಮಾಯಕರ ಸಾವಿಗೆ ಸಂತಾಪ ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಕಳೆದ 11 […]
ಮುದ್ದಂಡ ಹಾಕಿ ಉತ್ಸವ : ಸೆಮಿಫೈನಲ್ ಉದ್ಘಾಟನೆ… ಕೊಡವ ಜನಸಂಖ್ಯೆ ಹೆಚ್ಚಳಕ್ಕೆ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ

ಮಡಿಕೇರಿ : ಕೊಡವ ಸಮುದಾಯ ಅತ್ಯಂತ ಚಿಕ್ಕ ಸಮುದಾಯವಾಗಿದ್ದು, ಕೊಡವ ಜನಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ಕೊಡವ ಕುಟುಂಬ ತಂಡಗಳ ನಡುವಿನ ಮುದ್ದಂಡ ಕಪ್ ಹಾಕಿ ಉತ್ಸವದ (Muddanda Cup Hockey Festival) ಸೆಮಿಫೈನಲ್ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಕೊಡವ ಕುಟುಂಬಗಳು ಕನಿಷ್ಟ ಮೂರು ಮಕ್ಕಳನ್ನಾದರು ಹೊಂದುವ ಮೂಲಕ ಕೊಡವ ಜನಾಂಗದ ಅಭ್ಯುದಯಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಕೊಡಗಿನ 1176 ಕೊಡವ […]
ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್ ಲೋಕಾರ್ಪಣೆ

ಮಣಿಪಾಲ: ಮಣಿಪಾಲ್ (Manipal) ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE- ಮಾಹೆ), ಮಣಿಪಾಲದಲ್ಲಿ ಭಾರತದಲ್ಲಿಯೇ ವಿಶಿಷ್ಟವೆನಿಸುವ ‘ಮಣಿಪಾಲ್ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್’ (MHRC) ಅನ್ನು ಇದೇ ಏಪ್ರಿಲ್ 30, 2025ರಂದು ಆಂಧ್ರ ಪ್ರದೇಶ ರಾಜ್ಯಪಾಲರಾದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅವರು ಉದ್ಘಾಟಿಸಲಿದ್ದಾರೆ. ಈ ಕೇಂದ್ರ ವು ಜುಲೈ 2025ರಿಂದ ಸೇವೆಗೆ ತೆರೆದುಕೊಳ್ಳಲಿದೆ. ಮಾಹೆಯ ಅತ್ಯುನ್ನತ ಸಮಾಜಮುಖಿ ಯೋಜನೆಯಾದ ಇದು, ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಗಂಭೀರವಾದ ಕಾಯಿಲೆಯಿಂದ ಬಳಲಿಯುತ್ತಿರುವ ರೋಗಿಗಳು ಮತ್ತು ಅವರ […]
ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಅವಿರೋಧ ಆಯ್ಕೆ..!

ಕೊಡಗು : ಕೊಡಗು ಕಾಫಿ (Coffee) ಬೆಳೆಗಾರರ ಸಹಕಾರರ ಸಂಘದ ಚುನಾವಣೆ ದಿನಾಂಕ ಶುಕ್ರವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದು, ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮತ್ತು ಉಪಾಧ್ಯಕ್ಷರಾಗಿ ಸುರೇಶ್ ಮಾಯಮುಡಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು ಮತ್ತು ಬಿಜೆಪಿ(bjp) ಪ್ರಮುಖರು ಹಾಜರಿದ್ದರು.
power outage : ಏಪ್ರಿಲ್ 29 ರಂದು ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಸೀಟ್ ಫೀಡರ್‍ನಲ್ಲಿ ಏಪ್ರಿಲ್, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಮಂಗಳೂರು ರಸ್ತೆ, ತಾಳತ್ಮನೆ, ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ರೇಸ್‍ಕೋರ್ಸ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ಸ್ಟೋನ್ ಹಿಲ್, ಎಲ್.ಐ.ಸಿ ರಸ್ತೆ, ಹೊಸ ಬಡಾವಣೆ, ರಿಮೈಂಡ್ ಹೋಮ್ ಹಿಂಭಾಗ, ಡೈರಿ ಫಾರಂ, ಎಫ್.ಎಂ.ಸಿ ಕಾಲೇಜು ರಸ್ತೆ, ಕನ್ನಿಕಾ ಬಡಾವಣೆ, ಮೈತ್ರಿ ಜಂಕ್ಷನ್, ವಿದ್ಯಾನಗರ, ಮುಳಿಯ ಬಡಾವಣೆ, […]