ಕನ್ನಡತನದ ಗಂಧ-ಗಾಳಿ ಗೊತ್ತಿಲ್ಲದ ನಟಿಗೆ “ಗಂಧದ” ಸೋಪಿನ ಸಂಸ್ಥೆಯ ರಾಯಭಾರಿ ಮಾಡಿದ್ದೇಕೆ? ಸಂಸದ ಯದುವೀರ್ ಪ್ರಶ್ನೆ

Mysore Sandal Soap

ಮೈಸೂರು: ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್‌ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ಕಿಡಿಕಾರಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಇದು ಕಾಂಗ್ರೆಸ್‌ ಸರ್ಕಾರದ ಅವಿವೇಕದ ತೀರ್ಮಾನ ಎಂದು ಹೇಳಿದ್ದಾರೆ. 1916ರಲ್ಲಿ […]