ಮಡಿಕೇರಿ ಹಿಂದೂ ಮಲಯಾಳಿ ಸಂಘದಿಂದ ಪುಸ್ತಕ ವಿತರಣೆ : ಹೆಚ್ಚು ಅಂಕದೊಂದಿಗೆ ಉತ್ತಮ ಸಂಸ್ಕೃತಿಯನ್ನೂ ಮೈಗೂಡಿಸಿಕೊಳ್ಳಿ : ಕೆ.ಎಸ್.ರಮೇಶ್ ಕರೆ

ಮಡಿಕೇರಿ : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಹೆಚ್ಚು ಅಂಕ ಗಳಿಸಿದರೆ ಮಾತ್ರ ಸಾಲದು, ಉತ್ತಮ ಸಂಸ್ಕೃತಿಯನ್ನು ಕೂಡ ಮೈಗೂಡಿಸಿಕೊಳ್ಳಬೇಕು ಎಂದು ಹಿಂದೂ ಮಲಯಾಳಿ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್ ಅವರು ಕರೆ ನೀಡಿದ್ದಾರೆ. ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ನಗರದಲ್ಲಿ ನಡೆದ ೧ ರಿಂದ ೧೦ನೇ ತರಗತಿಯವರೆಗಿನ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಎಲ್ಲರಿಗೂ ಅಗತ್ಯವಿದೆ, ಶಿಕ್ಷಣದೊಂದಿಗೆ ಮಕ್ಕಳು ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಪೋಷಕರು […]
ಮರಾಠ, ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಡಿಕೇರಿ: ಕೊಡಗು (Kodagu) ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ೨೯ನೇ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.೮ ರಂದು ನಡೆಯಲಿದೆ. ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಬೆಳಿಗ್ಗೆ ೯ ಗಂಟೆಗೆ ಸಭೆ ನಡೆಯಲಿದೆ. ಸಭೆಯನ್ನು ಕರ್ನಾಟಕ ಮಾರಾಟಿ ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯ್ಕ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಮರಾಠ-ಮರಾಟಿ […]
RCB ವಿಜಯೋತ್ಸವ: ಕಾಲ್ತುಳಿತದಲ್ಲಿ ಕೊಡಗು ಮೂಲದ ಯುವತಿ ಬಲಿ

ಬೆಂಗಳೂರು ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ RCB ವಿಜಯೋತ್ಸವ ಸಂದರ್ಭ ಉಂಟಾದ ಕಾಲ್ತುಳಿತದಲ್ಲಿ ಕೊಡಗು (Kodagu) ಜಿಲ್ಲೆಯ ಯುವತಿ ಬಲಿಯಾಗಿದ್ದಾರೆ. ಮೂಲತಃ ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದವರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿ ಆಗಿರುವ ಕರುಣಾಕರ ಶೆಟ್ಟಿರವರ ಪುತ್ರಿ ಚಿನ್ಮಯಿ ಶೆಟ್ಟಿ (19) ಮೃತ ದುರ್ದೈವಿ. RCB ತಂಡದ ಅಭಿಮಾನಿ ಆಗಿದ್ದ ಈಕೆ ತನ್ನ ಗೆಳತಿಯರೊಂದಿಗೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಆದರೆ ನೂಕು ನುಗ್ಗಲಿನಿಂದಾಗಿ ಜೊತೆಗಿದ್ದ ಗೆಳತಿಯರಿಂದ ಪ್ರತ್ಯೇಕಗೊಂಡು ಕಾಲ್ತುಳಿತಕ್ಕೆ ಸಿಲುಕಿ ಚಿಂತಾಜನಕರಾಗಿದ್ದರು. ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ […]
‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ – ಸ್ಮಿತಾ ಅಮೃತರಾಜ್‌ಗೆ ʼವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ

ಮಡಿಕೇರಿ : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ […]