ಜು.03 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಲೋಚನಾ ಸಭೆ

ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಜುಲೈ ೦೩ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್‌ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಮುಖರು ತಿಳಿಸಿದ್ದಾರೆ.

ರೈತರಿಗೆ ಮಾಹಿತಿ : ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಅವಕಾಶ

ಮಡಿಕೇರಿ : ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೫-೨೬ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ […]

ಗ್ರಾಮ ಒನ್ ಕೇಂದ್ರ ನಡೆಸಲು ಆಸಕ್ತಿ ಹೊಂದಿದ್ದೀರಾ?- ಈ ಗ್ರಾಮಗಳಲ್ಲಿ ಅವಕಾಶವಿದೆ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯತ್‌ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net […]

ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ೧೦ ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ – ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಗೆ ಪತ್ರಿಕಾ ರಂಗದ ಕೊಡುಗೆ ಅಪಾರ : ಶಿವಕುಮಾರ್‌ ನಾಣಯ್ಯ ಅಭಿಮತ

ಮಡಿಕೇರಿ : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು […]