ಕೊಡಗಿನ ಯುವಜನತೆಗೆ ಉದ್ಯೋಗಾವಕಾಶ: ಮಡಿಕೇರಿಯಲ್ಲಿ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 09 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್, ಮಡಿಕೇರಿ, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಪೆಂಟಾಟೆಕ್, ಮಡಿಕೇರಿ, ಡಾಬರ್ ಮ್ಯಾನ್, ಮಂಗಳೂರು ಹಾಗೂ ಪಿಆರ್ ಕನ್‍ಸ್ಟ್ರಕ್ಷನ್ಸ್ ಕುಶಾಲನಗರ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು […]
ನಾಳೆಯಿಂದ ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಯಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ(5) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜುಲೈ, 6 […]
ಸಿನೆಮಾ ಇಂಡಸ್ರ್ಟಿಗೆ ಬಂದ ಮೊದಲ ಕೊಡವತಿ ನಾನು ಎಂದ ರಶ್ಮಿಕಾ ವಿರುದ್ಧ ಆಕ್ರೋಶ, ನಟಿ ಪ್ರೇಮಾ ಹೇಳಿದ್ದೇನು?

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಈಗ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೊಡವ ಸಮುದಾಯದಿಂದ ಸಿನಿಮಾಗೆ ಬಂದವರಲ್ಲಿ ನಾನೇ ಮೊದಲು ಎಂದು ಹೇಳುವ ಮೂಲಕ ಮತ್ತೊಂದು ವಿವಾದ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರಿಗೆ ರಶ್ಮಿಕಾ ಮಂದಣ್ಣ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ತಮ್ಮನ್ನು ತಾವು ಹೊಗಳಿಕೊಳ್ಳುವ ಭರದಲ್ಲಿ, ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದ ಏಕೈಕ […]
ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 35.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.97 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1540.50 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 950.98 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.17 ಮಿ.ಮೀ. ಕಳೆದ ವರ್ಷ ಇದೇ ದಿನ 8.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2213.01 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ವಿದ್ಯುತ್ ಆಘಾತಕ್ಕೆ ಯುವಕ ಬಲಿ – ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಶಾಸಕ ಡಾ. ಮಂತರ್ ಗೌಡ

ಮಡಿಕೇರಿ : ನಿನ್ನೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಹುಲಿತಾಳದ ಯುವಕ ಹೆಚ್.ಪಿ.ಪ್ರತೀಪ್ ಕುಟುಂಬಸ್ಥರನ್ನು ಶಾಸಕ ಡಾ. ಮಂತರ್ ಗೌಡ (Mantar Gowda) ಭೇಟಿಯಾಗಿ ಸಾಂತ್ವನ ಹೇಳಿದರು. ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಮಂತರ್ ಗೌಡ ಘಟನೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದರು. ನಿನ್ನೆ ಮನೆಯ ಬಳಿ ವಿದ್ಯುತ್ ಕಂಬ ಏರಿ ದುರಸ್ಥಿ ವೇಳೆ ವಿದ್ಯುತ್ ತಗಲಿ ಪ್ರತೀಪ್ ಮೃತಪಟ್ಟಿದ್ದರು.