ಪೊಲೀಸರ ಭರ್ಜರಿ ಕಾರ್ಯಚರಣೆ : ಜಾನುವರು ಕಳ್ಳರ ಬಂಧನ

ಜೂ.24 ರಂದು ನೋಕ್ಯ ಗ್ರಾಮದ ನಿವಾಸಿ ಆನಂದ ಎ.ಎಸ್ ಅವರ ಎಸ್ಟೇಟ್ನ ಕೊಟ್ಟಿಗೆಯಲ್ಲಿ ಕಟ್ಟಿದ್ದ 02 ಹಸುಗಳನ್ನು ಕಳ್ಳತನ ಮಾಡಿರುವ ಕುರಿತು ಹಾಗೂ ಭದ್ರಗೋಳ ಗ್ರಾಮದ ನಿವಾಸಿ ಪಿ.ಪಿ. ಮುತ್ತಣ್ಣ, ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ 01 ಎಮ್ಮೆಯನ್ನು ಕಳ್ಳತನ ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಂಡರು ಎರಡು ಪ್ರಕರಣಗಳ ಆರೋಪಿ ಪತ್ತೆಗಾಗಿ ಮಹೇಶ್ ಕುಮಾರ್.ಎಸ್, ಡಿಎಸ್ಪಿ, ವಿರಾಜಪೇಟೆ ಉಪವಿಭಾಗ, ಶಿವರಾಜ ಆರ್.ಮುಧೋಳ್, ಸಿಪಿಐ, ಗೋಣಿಕೊಪ್ಪ ವೃತ್ತ, […]
ಕಾಂತೂರು ಮೂರ್ನಾಡು ಗ್ರಾಮ ಪಂಚಾಯತಿ ವತಿಯಿಂದ ಅಂಗನವಾಡಿಗಳಿಗೆ ಸಾಮಗ್ರಿಗಳ ವಿತರಣೆ

ಮೂರ್ನಾಡು: ಕಾಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟ 12 ಅಂಗನವಾಡಿ ಕೇಂದ್ರಗಳಿಗೆ (Anganwadis) ಗ್ರಾಮ ಪಂಚಾಯಿತಿ ವತಿಯಿಂದ ಬಕೆಟ್, ಮಗ್, ಹ್ಯಾಂಡ್ ವಾಶ್, ಬ್ಲೀಚಿಂಗ್ ಪೌಡರ್, ಚಾಪೆ, ಕೌದಿ, ಕಂಬಳಿ, ಪಿನಾಯಿಲ್, ಪೊರಕೆಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷೆ ರೇಖಾ, ಸದಸ್ಯರಾದ ಸುಜಾತ, ವಿಜಯಲಕ್ಷ್ಮಿ, ಮೂಡೇರ ಅಶೋಕ, ಅಯ್ಯಪ್ಪ, ಈರ ಸುಬ್ಬಯ್ಯ, ಅಪ್ಪಚಂಡ ಮೀನಾಕ್ಷಿ ದೇವಯ್ಯ, ಅವರೇಮಾದಂಡ ಅನಿಲ್, ಪುಷ್ಪಲತಾ, ಪುಷ್ಪ, ಸೋಮಣ್ಣ, ದಿವ್ಯ, ನಿಂಗಪ್ಪ, ಕೃಷ್ಣಪ್ಪ, ಯಶ್ವಿನ್ ಪೊನ್ನಪ್ಪ, ರಾಜೇಶ್, ರೀತ, […]
ಗರವಾಲೆ ಅಂಗನವಾಡಿ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ

ಅಂಗನವಾಡಿ ಸಹಾಯಕಿಯ ಬೇಬಿ ಅಂಗನವಾಡಿಯ ಒಳಗಿದ್ದ ಸಂದರ್ಭದಲ್ಲಿ ಮರ ಬಿದ್ದು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆ ಹಾಗೂ ಎದೆ ಬಾಗಕ್ಕೆ ಗಾಯಗಳಾಗಿವೆ.
ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆ ಅಬ್ಬರ ಹೇಗಿತ್ತು ನೋಡಿ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.29 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1617.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 997.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.65 ಮಿ.ಮೀ. ಕಳೆದ ವರ್ಷ ಇದೇ ದಿನ 34.68 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2329.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ವಿರಾಜಪೇಟೆಯ ಉದ್ಯಮಿ ಮಂಜುನಾಥ್ ಮಲ್ಯ ನಿಧನ

ವಿರಾಜಪೇಟೆಯ ಉದ್ಯಮಿ ಗಾಂಧಿನಗರ ನಿವಾಸಿ ಶ್ರೀ ಮಂಜುನಾಥ್ ಮಲ್ಯ (ಮಂಜು )ಶಾಂತಲಾ ಎಜೆನ್ಸಿ ಮಾಲೀಕರು ಆಕಸ್ಮಿಕ ವಾಗಿ ಕಾಲುಜಾರಿ ತಮ್ಮ ಸ್ವಂತ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.