ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ

ಇಂದು ಸ. ಕಿ. ಪ್ರಾ. ಹೆಗ್ಗಳ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ ನಡೆಯಿತು. ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗುತ್ತದೆ. ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿಯನ್ನು ವಹಿಸಲಾಗಿದೆ. ಪ್ರಧಾನ ಮಂತ್ರಿ, ಶಿಕ್ಷಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.
Power Cut: ನಾಳೆ ಕೊಡಗಿನಲ್ಲಿ ಹಲವೆಡೆ ಕರೆಂಟ್ ಇರಲ್ಲ: ಎಲ್ಲೆಲ್ಲಿ ಗೊತ್ತಾ?

ವಿರಾಜಪೇಟೆ (Virajpet) 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆಎಸ್‍ಆರ್‍ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಗೋಣಿಕೊಪ್ಪ ರಸ್ತೆ, ಪಂಜರಪೇಟೆ, ವಿದ್ಯಾನಗರ, ಕೆಎಸ್‍ಆರ್‍ಟಿಸಿ, ಶಾಂತಿನಗರ, ಸುಭಾಶ್‍ನಗರ, ಮೀನುಪೇಟೆ, ಹೆಗ್ಗಳ, ಬೇಟೋಳಿ, ಆರ್ಜಿ, ರಾಮನಗರ, ತೋರ, ಬೂದಿಮಾಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]
ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಅಕ್ರಮ ರೆಸಾರ್ಟ್ – ನೆಲಸಮಗೊಳಿಸಲು ಪರಿಸರ ಪ್ರೇಮಿಗಳ ಆಗ್ರಹ..!

ಮಡಿಕೇರಿ: ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಭೂ ಕುಸಿತ ಪ್ರದೇಶಗಳಲ್ಲಿ ನಿರ್ಮಾಣ ಮಾಡಿರುವ ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ನೆಲಸಮಗೊಳಿಸಬೇಕು ಎಂದು ಪರಿಸರವಾದಿ (Environmentalist) ಕರ್ನಲ್ ಸಿ.ಪಿ.ಮುತ್ತಣ್ಣ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಡಗಿನಲ್ಲಿ ತೋಟ, ಜಮ್ಮಾ ಬಾಣೆ ಮತ್ತು ಜೌಗು ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗೆ ಪರಿವರ್ತಿಸುವುದನ್ನು ನಿಷೇಧಿಸುತ್ತದೆ. ಅಲ್ಲದೇ, ಭೂ ಪರಿವರ್ತನೆಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾದಲ್ಲಿ ಅದನ್ನು ಪರಿಶೀಲಿಸಲು ಮತ್ತು ಭೂ ಕುಸಿತ ಪೀಡಿತ ಪ್ರದೇಶಗಳಲ್ಲಿ ಪರಿವರ್ತನೆಗಳಿಗೆ ಅನುಮತಿ ನಿರಾಕರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸುವ ಆದೇಶ ಹೊರಡಿಸಿತ್ತು. ಆದರೆ, […]
26 ಕಿ.ಮೀ ಮೈಲೇಜ್, 7-ಸೀಟರ್, 8 ಲಕ್ಷ ಬೆಲೆ: ಈ ಮಾರುತಿ ಕಾರಿನ ಖರೀದಿಗೆ ಮುಗಿಬಿದ್ದ ಗ್ರಾಹಕರು

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಪ್ರಮುಖ ಎಂಪಿವಿಯಾಗಿದ್ದು, ಇದು ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿದೆ. ದೊಡ್ಡ ಕುಟುಂಬಗಳಿಗೂ ಹೆಚ್ಚು ಸೂಕ್ತವಾಗಿದ ಈ ಕಾರು ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾಮುಂದು – ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಜೂನ್ ತಿಂಗಳ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲೂ ಇದೇ ಎರ್ಟಿಗಾ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಈ 14,151 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ ಜೂನ್ ತಿಂಗಳಲ್ಲಿ […]
ಯಲಹಂಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾದ ಮಾಹೆ ಬೆಂಗಳೂರು

ಬೆಂಗಳೂರು: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಬೆಂಗಳೂರು (Bangalore) ಕ್ಯಾಂಪಸ್, ಯಲಹಂಕದಲ್ಲಿನ ವಿವಿಧ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿದ್ದು, ಅವುಗಳ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿತು. ಆವಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಬಹುಪಯೋಗಿ ಸಭಾಂಗಣವನ್ನು ಯಲಹಂಕ ಶಾಸಕ ಶ್ರೀ ಎಸ್.ಆರ್. ವಿಶ್ವನಾಥ್ ಅವರು ಮತ್ತು ಮಾಹೆ ಬೆಂಗಳೂರಿನ ಹೆಚ್ಚುವರಿ ರಿಜಿಸ್ಟ್ರಾರ್ ಶ್ರೀ ರಾಘವೇಂದ್ರ ಪ್ರಭು ಪಿ. ಉದ್ಘಾಟಿಸಿದರು. ಯಲಹಂಕದ ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಮೂಲಸೌಕರ್ಯ ಸುಧಾರಿಸುವುದು ಮತ್ತು ಸಮುದಾಯ ಅಭಿವೃದ್ಧಿಯನ್ನು ಉತ್ತೇಜಿಸುವ ಸಲುವಾಗಿ […]
ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ಮಾಹಿತಿ

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 15.42 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.49 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1633.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1009.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.78 ಮಿ.ಮೀ. ಕಳೆದ ವರ್ಷ ಇದೇ ದಿನ 20.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2344.34 ಮಿ.ಮೀ, ಕಳೆದ ವರ್ಷ ಇದೇ […]
ಜನ್ಮದಿನದಂದು ಶಾಸಕ ಪೊನ್ನಣ್ಣ ಶ್ರೀ ಭಗಂಡೇಶ್ವರ – ತಲಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಎ.ಎಸ್.ಪೊನ್ನಣ್ಣ ತಮ್ಮ 51ನೇ ಜನ್ಮದಿನದಂದು ಪತ್ನಿ ಕಾಂಚನ ಅವರೊಂದಿಗೆ ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಅಭಿವೃದ್ಧಿ,ನೆಮ್ಮದಿ,ಸಮೃದ್ದಿ ತರುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೊಡಗಿನ ಯುವ ಫುಟ್‌ಬಾಲ್ ಆಟಗಾರ ಆತ್ಮಹತ್ಯೆ

ಸುಂಟಿಕೊಪ್ಪ: ಕೊಡಗು (Kodagu) ಜಿಲ್ಲೆಯ ಉದಯೋನ್ಮುಖ ಯುವ ಫುಟ್ ಬಾಲ್ (Football) ಆಟಗಾರ(ಗೋಲ್ ಕೀಪರ್) ಕಿರಣ ಸುಂಟಿಕೊಪ್ಪದ ಬೆಟ್ಟಗೇರಿ ತೋಟದ ಲೈನ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಡಗು ಜಿಲ್ಲೆಯಲ್ಲಿ ಪ್ರತಿಷ್ಠಿತ ಫುಟ್ ಬಾಲ್ ತಂಡಗಳಲ್ಲಿ ಗೋಲ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿರುವ ಕಿರಣ ಎಲ್ಲರ ಫೇವರೇಟ್ ಗೋಲ್ ಕೀಪರ್ ಆಗಿ ಹಲವು ಪ್ರಶಸ್ತಿಯನ್ನು ಜಯಿಸಿದ್ದಾನೆ.