ಕಡಗದಾಳು ಅಂಗನವಾಡಿಯಲ್ಲಿ LKG, UKG ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ

ಮಡಿಕೇರಿ : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಐಸಿಡಿಎಸ್ ಸುವರ್ಣ ಮಹೋತ್ಸವದ ಅಂಗವಾಗಿ ಸರ್ಕಾರ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸುತ್ತಿದ್ದು, ಮಡಿಕೇರಿ ತಾಲೂಕಿನ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಯುಕೆಜಿ ಪ್ರಾರಂಭವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕೆಂದರು. ಕಡಗದಾಳು ಗ್ರಾಮ ಪಂಚಾಯಿತಿಯಿಂದ 18 ಮಕ್ಕಳಿಗೆ ಸಮವಸ್ತ್ರ, […]
ಕೊಡಗು ಜಿಲ್ಲೆಯ ಮಳೆ ವಿವರ: ಎಲ್ಲಿ ಮಳೆ ತಗ್ಗಿದೆ?

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 12.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.64 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1665.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1026.73 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.48 ಮಿ.ಮೀ. ಕಳೆದ ವರ್ಷ ಇದೇ ದಿನ 7.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2408.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು : ಪ್ರೊ. ಅಶೋಕ ಸಂಗಪ್ಪ ಆಲೂರ

ಕುಶಾಲನಗರ : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ. ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತಾದ […]