ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ

ಮಡಿಕೇರಿ: ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‍ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್‍ಗಳು ಮಾಹಿತಿ ಪಡೆದಿದ್ದು, ಈ […]

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮುತ್ತಾರ್ಮುಡಿ ಗದ್ದೆಯಲ್ಲಿ ಬೇಲ್‍ರ ಕೋಯಿಮೆ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಹಾಗೂ ಕನೆಕ್ಟಿಂಗ್ ಕೊಡವಾಸ್ ಇವರ ಸಹಯೋಗದಲ್ಲಿ ಮುತ್ತಾರ್ಮುಡಿ ಗದ್ದೆಯಲ್ಲಿ ಬೇಲ್‍ರ ಕೋಯಿಮೆ ಕಾರ್ಯಕ್ರಮವು ಸೋಮವಾರ ನಡೆಯಿತು. ಮೂರ್ನಾಡು ಪಿಯು ಕಾಲೇಜು, ಜ್ಞಾನಜ್ಯೋತಿ ಕಾಲೇಜು, ಕೊಡಗು ವಿದ್ಯಾಲಯ, ಮಾರುತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬೇಲ್‍ರ ಕೋಯಿಮೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ಮಾತನಾಡಿ ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಕೃಷಿಯನ್ನೇ ನಂಬಿ ಬದುಕು ನಡೆಸುತ್ತಿದ್ದೇವೆ. ಆ ನಿಟ್ಟಿನಲ್ಲಿ […]