ಅನುದಾನಿತ ಮತ್ತು ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಕೆಗೆ ಆಗ್ರಹ – ಶಾಸಕ ಡಾ. ಮಂತರ್‌ ಗೌಡರಿಗೆ ಮನವಿ ಸಲ್ಲಿಸಿದ ನಿಯೋಗ..!

ಸೋಮವಾರಪೇಟೆ : ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನಿತ ಮತ್ತು ಸರ್ಕಾರಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕ ಮತ್ತು ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ವತಿಯಿಂದ ಶಾಸಕ ಡಾ. ಮಂತರ್ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸೋಮವಾರಪೇಟೆಯಲ್ಲಿ ಭೇಟಿಯಾದ ನಿಯೋಗ ತಮ್ಮ ಸಮಸ್ಯೆಗಳ ಕುರಿತು ಶಾಸಕರಿಗೆ ಮನವರಿಕೆ ಮಾಡಿಕೊಟ್ಟಿತು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ. ಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಕಳೆದ […]

Big Breaking News : ಧರ್ಮಸ್ಥಳದಲ್ಲಿ ನೂರಾರು ಶ* ಹೂತಿಟ್ಟ ಕೇಸ್‌ – ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ..!

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ವ್ಯಕ್ತಿಯೊಬ್ಬ ಹೇಳಿದ ವಿಚಾರ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ(SIT)ವನ್ನು ರಾಜ್ಯ ಸರ್ಕಾರ ರಚಿಸಿದೆ. ಪೊಲೀಸ್‌ ಮಹಾ ನಿರ್ದೇಶಕ ಡಾ. ಪ್ರಣವ್‌ ಮೊಹಾಂತಿ ಈ ತಡದ ಮುಖ್ಯಸ್ಥರಾಗಿರಲಿದ್ದು, ಸದಸ್ಯರಾಗಿ ಉಪ ಪೊಲೀಸ್‌ ಮಹಾನಿರ್ದೇಶಕ ಎಂ.ಎಂ. ಅನುಚೇತ್‌, ಉಪ ಪೊಲೀಸ್‌ ಆಯುಕ್ತರಾದ ಸೌಮ್ಯಲತಾ, ಪೊಲೀಸ್‌ ಅಧೀಕ್ಷ ಜಿತೇಂದ್ರ ಕುಮಾರ್‌ ದಯಾಮ ಇರಲಿದ್ದಾರೆ. ಪ್ರಕರಣದ ತನಿಖೆಯ ಪ್ರಗತಿಯನ್ನು ಆಗಿಂದಾಗ್ಗೆ […]

ಭಾಗಮಂಡಲ ಗಜಾನನ ಯುವಕ ಸಂಘದ ವತಿಯಿಂದ ಆಂಬುಲೆನ್ಸ್‌ ಸೇವೆ ಆರಂಭ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ಗ್ರಾಮ ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ಆಂಬುಲೆನ್ಸ್‌ ಸೇವೆ ಆರಂಭಿಸಲಾಗಿದೆ. ನೂತನ ಆಂಬುಲೆನ್ಸ್‌ಗೆ ಭಾಗಮಂಡಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹ್ಯಾರಿಸ್‌ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಜಾನನ ಯುವಕ ಸಂಘ ಸಮಾಜಕ್ಕೆ ಅನುಕೂಲವಾಗುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗ್ರಾಮಸ್ಥರು ಕೂಡಾ ಸಹಕಾರ ನೀಡಬೇಕೆಂದರು. ಸಂಘದ ಅಧ್ಯಕ್ಷ ಗೌರೀಶ್‌ ರೈ […]