ಹೆಗ್ಗಳ ಸರ್ಕಾರಿ ಶಾಲೆಗೆ ಪ್ರಿಂಟರ್ ಕೊಡುಗೆ

ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ‌ಕಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ವಿರಾಜಪೇಟೆ ಶಾಖೆ, ಇವರು ಶನಿವಾರ ದಂದು ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ವೇಳೆ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಅನೀಶ್ ಹಾಗೂ ಬ್ಯಾಂಕ್ ಸಿಬ್ಬಂದಿ ಗಣೇಶ್, ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು…

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘದ ವತಿಯಿಂದ ಭಗಂಡೇಶ್ವರ ದೇವಾಲಯದ ಆವರಣವನ್ನು ಶುಚಿಗೊಳಿಸಲಾಯಿತು. ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ದೇವಾಲಯದ ಆವರಣದಲ್ಲಿ ಹಾವಸೆ(ಪಾಚಿ) ನಿರ್ಮಾಣವಾಗಿತ್ತು. ಇದರಿಂದಾಗಿ ದೇವಾಲಯಕ್ಕೆ ಆಗಮಿಸುವ ಭಕ್ತರು ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕುವಾಗ ಜಾರುವ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಇಲ್ಲಿನ ಅರ್ಚಕರು ಇತ್ತೀಚೆಗೆ ಯುವಕ ಸಂಘದ ಪದಾಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಯುವಕ ಸಂಘದ ಸದಸ್ಯರು ಸೋಮವಾರ ಕಾರ್ಯಪ್ರವೃತ್ತರಾಗಿ ಆವರಣವನ್ನು ಶುಚಿಗೊಳಿಸಿದರು. ಸುಣ್ಣ ಪುಡಿ, ಬ್ಲೀಚಿಂಗ್‌ ಪೌಡರ್‌ ಹಾಕಿ […]

Breaking News : ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ- ಚಿನ್ನಾಭರಣ ದೋಚಿದ ಯುವಕ..! ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಕೃತ್ಯ..!

  ಮಡಿಕೇರಿ : ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕತ್ತಿನಲ್ಲಿದ್ದ ಸರ ಕದ್ದೊಯ್ದಿರುವ ಘಟನೆ ಕೊಂಡಗೇರಿಯಲ್ಲಿ ನಡೆದಿದ್ದು, ಜಿಲ್ಲೆಯ ಜನ ಬೆಚ್ಚಿ ಬೀಳುವಂತೆ ಮಾಡಿದೆ. ಇಂದು ಮಧ್ಯಾಹ್ನ ವೇಳೆಗೆ ಘಟನೆ ನಡೆದಿದ್ದು, ಸಾರಮ್ಮ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಸಾರಮ್ಮ ತನ್ನ ಸೊಸೆಯೊಂದಿಗೆ ಮನೆಯಲ್ಲಿದ್ದು, ʼನಾನು ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದೇನೆ. ಕುಡಿಯೋಕೆ ನೀರು ಕೊಡಿʼ ಅಂತ ವ್ಯಕ್ತಿಯೊಬ್ಬ ಬಂದಿದ್ದಾನೆ. ಕೆಲವೇ ನಿಮಿಷದಲ್ಲಿ ಮಹಿಳೆ ಬಳಿಯಿದ್ದ ಸರವನ್ನು ಕಿತ್ತುಕೊಳ್ಳಲು ಯತ್ನಿಸಿದ್ದು, ಅದಕ್ಕೆ ಆಕೆ ಪ್ರತಿರೋಧವೊಡ್ಡಿದಾಗ ಹಲ್ಲೆ ನಡೆಸಿ ಚಿನ್ನಾಭರಣ […]

ದುದ್ದಿಯಂಡ ಮುಸ್ಕಾನ್ ಸೂಫಿ ಚೊಚ್ಚಲ ಕವನ ಸಂಕಲನ ಪ್ರಕಟಿಸಿದ ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್

ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡಗಿನ ವಿದ್ಯಾರ್ಥಿನಿಯೊಬ್ಬರು ರಚಿಸಿದ ಕವನ ಸಂಕಲನ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡು ಸದ್ದಿಲ್ಲದೆ ಸುದ್ದಿಯಾಗಿದೆ. ವಿರಾಜಪೇಟೆ ಮೂಲದ ದುದ್ದಿಯಂಡ ಮುಸ್ಕಾನ್ ಸೂಫಿ ಅವರ ಚೊಚ್ಚಲ ಇಂಗ್ಲಿಷ್ ಕೃತಿ ‘ದಿಸ್ ಟೂ ಶೆಲ್ ಪಾಸ್’ ಅನ್ನು ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್ ಪ್ರಕಟಿಸಿದ್ದು, ಅಮೆರಿಕ ಮೂಲದ ಪ್ರಸಿದ್ಧ ಕವಿ ಎಮಿಲಿ ಡಿಕ್ಕಿನ್ಸನ್ ಸ್ಮರಣಾರ್ಥವಾಗಿ ನೀಡಲಾಗುವ 21ನೇ ಶತಮಾನದ ಅಂತರಾಷ್ಟ್ರೀಯ ಮಟ್ಟದ ‘ಇಂಡಿ ಆಥರ್ಸ್ ಅವಾರ್ಡ್ 2025’ ಕ್ಕೆ ನಾಮನಿರ್ದೇಶನಗೊಂಡಿದೆ. ಕೊಡವ ಮುಸ್ಲಿಂ ಸಮುದಾಯದ […]