ಕೊಂಡಂಗೇರಿ ಸರ ಕಳ್ಳತನ ಪ್ರಕರಣದಲ್ಲಿ ಟ್ವಿಸ್ಟ್: ಸಂಬಂಧಿಯೇ ಮಾಸ್ಟರ್ ಮೈಂಡ್!

ಸಿದ್ದಾಪುರ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮ ಪೆರಂಬು ಎಂಬಲ್ಲಿ ವಾಸವಿರುವ ಸಫಾನ ಮತ್ತು ಸಾರಮ್ಮ ಎಂಬುವವರು ಮನೆಯಲ್ಲಿದ್ದ ಸಂದರ್ಭ ಜುಲೈ 21 ರಂದು ಮಧ್ಯಾಹ್ನ ಸುಮಾರು 01.30 ಘಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ನೀರು ಕೇಳುವ ನೆಪದಲ್ಲಿ ಮನೆಯ ಬಳಿ ಬಂದು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಗಿದ್ದರು. ಈ ಪ್ರಕರಣದಲ್ಲಿ ಆರೋಪಿ ಮುನಾವರ್ 26 ವರ್ಷ ಎಂಬಾತನನ್ನು […]
ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವ ಮುನ್ನ ಈ ವಿಷಯಗಳು ತಿಳಿದಿರಲಿ!

ಭಾರತೀಯ ಕಾರು ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದ್ದು, ಅದೇ ವೇಗದಲ್ಲಿ ಸೆಕೆಂಡ್ ಹ್ಯಾಂಡ್ ಕಾರುಗಳ (Second hand cars) ಮಾರುಕಟ್ಟೆಯೂ ವಿಸ್ತರಿಸುತ್ತಿದೆ. ಅನೇಕ ಜನರು ಸೆಕೆಂಡ್ ಹ್ಯಾಂಡ್ ಕಾರು ಗಳನ್ನು ಖರೀದಿಸಲು ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಬಳಸಿದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಖರೀದಿಸುವ ಮುನ್ನ ಯಾವೆಲ್ಲ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಬಳಸಿದ ಕಾರನ್ನು ಖರೀದಿಸುವಾಗ ಏನೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಬಜೆಟ್‌ಗೆ ಸೂಕ್ತ ಕಾರು ನಿಮ್ಮ ಅಗತ್ಯಗಳಿಗೆ […]
ಶುಂಠಿಗೆ ಹೆಚ್ಚಿದ ರೋಗ: ಸರಿಯಾದ ನಿರ್ವಹಣೆ ಹೇಗೆ?

ಮಡಿಕೇರಿ:- ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಂಠಿ (Ginger) ಬೆಳೆಯಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿದ್ದು, ರೈತರು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಶೇ.60-70ರಷ್ಟು ಇಳುವರಿ ನಷ್ಠ ಅನುಭವಿಸಬೇಕಾಗುತ್ತದೆ ಎಂದು ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ.ಹರೀಶ್ ಬಿ.ಎಸ್. ಅವರು ತಿಳಿಸಿದರು. ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ “ಶುಂಠಿ […]
ಕೊಡಗು: ಕಳೆದ 24 ಗಂಟೆಗಳಲ್ಲಿ ಮಳೆ ಅಬ್ಬರ ಹೇಗಿತ್ತು ನೋಡಿ

ಮಡಿಕೇರಿ:- ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 22.69 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 42.70 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1877.04 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1707.65 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 36.05 ಮಿ.ಮೀ. ಕಳೆದ ವರ್ಷ ಇದೇ ದಿನ 51.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2843.61 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ರದ್ದಾಗುತ್ತಾ ನಟ ದರ್ಶನ್, ಪವಿತ್ರಾ ಜಾಮೀನು..? ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ – ಅಂತಿಮ ಆದೇಶದ ಮೇಲೆ ಎಲ್ಲರ ಕುತೂಹಲ..!

ನವದೆಹಲಿ: ನಟ ದರ್ಶನ್ಗೆ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಮುಂದಿನ ವಾರಕ್ಕೆ ಕಾಯ್ದಿರಿಸಿದೆ.ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ನಟ ದರ್ಶನ್ (Darshan) ಹಾಗೂ ಇತರರಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆರೋಪಿಗಳಾದ ಪವಿತ್ರಾ ಗೌಡ(A1), ದರ್ಶನ್(A2), ಪ್ರದೂಷ್(A14), ಲಕ್ಷ್ಮಣ್(A12), ನಾಗರಾಜ್(A11), ಅನುಕುಮಾರ್(A7), ಜಗದೀಶ್(A6)ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೊರ್ಟ್‌ನಲ್ಲಿ ಪ್ರಶ್ನಿಸಿತ್ತು. ಇಂದು ವಾದ ಪ್ರತಿ […]
ಹೊಸ ಬ್ಯುಸಿನೆಸ್ ಶುರು ಮಾಡಿದ ನಟಿ ರಶ್ಮಿಕಾ ಮಂದಣ್ಣ!

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಭಾರತೀಯ ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು ಮುಟ್ಟಿದ್ದೆಲ್ಲ ಚಿನ್ನ. ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿವೆ. ಇದೀಗ ನಟಿ ರಶ್ಮಿಕಾ ಬ್ಯುಸಿನೆಸ್ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಈ ಬಗ್ಗೆ ರಶ್ಮಿಕಾ, ತಮ್ಮ ತಾಯಿ ಅವರೊಂದಿಗಿನ ವಿಡಿಯೋ ಕಾಲ್‌ನ ಸಂಭಾಷಣೆ ಮೂಲಕ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಹೊಸ ಬ್ಯುಸಿನೆಸ್ ಶುರು ಮಾಡಿದ್ದಾರೆ. […]
ನೇಣು ಬಿಗಿದು ಶಿಕ್ಷಕಿ ಆತ್ಮಹ*ತ್ಯೆ – ಪತಿ ಕುಟುಂಬದ ವಿರುದ್ಧ ಕೊ*ಲೆ ಆರೋಪ..!

ನಾಪೋಕ್ಲು : ಶಿಕ್ಷಕಿಯೊಬ್ಬರು (Teacher) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಸಫ್ರೀನಾ(32)ಆತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕಿ.ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಗಂಭೀರ ಸ್ವರೂಪದಲ್ಲಿದ್ದ ಅವರನ್ನು ತಕ್ಷಣ ನಾಪೋಕ್ಲು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ನಡುವೆ ಪತಿ ನಜೀರ್ ವಿರುದ್ಧ ಸಫ್ರೀನಾ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾನೆಂದು ಗಂಭೀರ ಆರೋಪ ಮಾಡಿದ್ದಾರೆ. […]