ಅಪ್ಪು ಕಪ್ ಸೀಸನ್ 3 ಬ್ಯಾಡ್‌ಮಿಂಟನ್ ಪಂದ್ಯಾವಳಿಗೆ ಚಾಲನೆ

ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ಆಯೋಜಿಸಲಾಗುವ ʼಅಪ್ಪುಕಪ್ ಸೀಸನ್ 3ʼರ ಬ್ಯಾಡ್‌ಮಿಂಟನ್ ಪಂದ್ಯಾವಳಿಗೆ ಇಂದು ನಗರದ ಕಿಂಗ್ಸ್ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ತೆರೆ ಮೇಲೆ ಮನರಂಜಿಸುವ ತಾರೆಯರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಕಾತುರದಿಂದ ಕಾಯುತ್ತಿದ್ದುದು ಕಣ್ಣಿಗೆ ಹಬ್ಬದಂತಿತ್ತು. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಗೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಲಾಯಿತು. ವೇದಿಕೆಯ ಮೇಲೆ ನಟ ಅನಿರುದ್ಧ್, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸೇರಿದಂತೆ ವಿವಿಧ ತಂಡದ ನಾಯಕರು […]
ಇಂಜಿನಿಯರಿಂಗ್ ಫಲಿತಾಂಶ ಪ್ರಕಟ – ಕುಶಾಲನಗರ ಕಾಲೇಜಿನ ವಿ.ಜೆ. ಜಾಯ್ಸ್ ಲೀನಾ ರಾಜ್ಯಕ್ಕೆ 2ನೇ ರ‍್ಯಾಂಕ್

ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿನಿ ವಿ ಜೆ ಜಾಯ್ಸ್ ಲೀನಾ 2024- 25ನೇ ಶೈಕ್ಷಣಿಕ ಸಾಲಿನ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ರ‍್ಯಾಂಕ್ ಗಳಿಸಿದ್ದಾರೆ. ಕೊಡಗು ಜಿಲ್ಲೆಯ ಏಕೈಕ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಇದೇ ಪ್ರಥಮ ಬಾರಿಗೆ ಈ ಗೌರವಕ್ಕೆ ಭಾಜನವಾಗಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಫಲಿತಾಂಶ ಪ್ರಕಟಿಸಿದ್ದು ರ‍್ಯಾಂಕ್ ಪಟ್ಟಿ ಬಿಡುಗಡೆ ಮಾಡಿದೆ. ಇತ್ತೀಚೆಗೆ ಬೆಳಗಾಂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ 25ನೇ ಘಟಿಕೋತ್ಸವದಲ್ಲಿ ಜಾಯ್ಸ್ ಲೀನಾ ಅವರಿಗೆ ಪ್ರಮಾಣ ಪತ್ರ ನೀಡಲಾಯಿತು. […]
ಉದ್ಯೋಗಾವಕಾಶ: ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ […]
Power Cut – ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್3 ಕೆಎಸ್‍ಆರ್‍ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 26 ರಂದು 09.30 ರಿಂದ ಸಂಜೆ 5.00 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣದ ಮೀನುಪೇಟೆ, ಆರ್ಜಿ, ಬೇಟೋಳಿ, ಹೆಗ್ಗಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ, ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲಾರಿ & ಕಾರು ಮುಖಾಮುಖಿ ಡಿಕ್ಕಿ – ಕಾರಿನಲ್ಲಿದ್ದ ನಾಲ್ವರು ದುರ್ಮರಣ..!

ಸಂಪಾಜೆ : ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕೊಯನಾಡು ಬಳಿ ಸಂಭವಿಸಿದೆ. ಮಂಗಳೂರಿನಿಂದ ಮಡಿಕೇರಿ ಕಡೆ ಬರುತ್ತಿದ್ದ ಲಾರಿಗೆ ಮಡಿಕೇರಿ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿರುವ ಮಾರ್ಗದಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರು ಕೊಡಗು ಜಿಲ್ಲೆಯ ಗೋಣಿಕೊಪ್ಪ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಕಿಬ್ ಹಾಗೂ ರೀಶು […]
ನಾಡ ಹಬ್ಬ ಮೈಸೂರು ದಸರಾ: ಸುದ್ದಿ ಛಾಯಾಚಿತ್ರ ಸ್ಪರ್ಧೆ…

ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ 2025-26 ನೇ ಸಾಲಿನ ದಸರಾ ಮಹೋತ್ಸವ ಪ್ರಯುಕ್ತ ಪತ್ರಿಕಾ ಛಾಯಾಗ್ರಾಹಕರಿಗೆ ರಾಜ್ಯಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಕರ್ನಾಟಕದಾದ್ಯಂತ ರಾಜ್ಯ ಹಾಗೂ ಸ್ಥಳೀಯ ಮಟ್ಟದ ಪತ್ರಿಕೆಯಲ್ಲಿ ಛಾಯಾಗ್ರಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರು ಹಾಗೂ ಪತ್ರಿಕೆಗಳ ಹವ್ಯಾಸಿ ಸುದ್ದಿ ಛಾಯಾಗ್ರಾಹಕರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿಜೇತರಾದವರಿಗೆ ಪ್ರಥಮ ಬಹುಮಾನ 25,000, ದ್ವಿತೀಯ 15,000, ತೃತೀಯ ಬಹುಮಾನ 10,000 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ […]
ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪಿಸಿದ ಉದ್ಯಮಿ ಜಿ. ಮುಕುಲ್ ಮಹೀಂದ್ರ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದಲ್ಲಿ ಸುಂಟಿಕೊಪ್ಪದ ಯುವ ಕಾಫಿ ಉದ್ಯಮಿ ಜಿ. ಮುಕುಲ್ ಮಹೀಂದ್ರ ತಮ್ಮ ತಂದೆ ಜಿ.ಎಂ. ಮಹೀಂದ್ರ ಹೆಸರಿನಲ್ಲಿ ೨೫ ಸಾವಿರ ರೂ. ದತ್ತಿನಿಧಿ ಸ್ಥಾಪಿಸಿದ್ದಾರೆ. ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ದತ್ತಿನಿಧಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಈ ಸಂದರ್ಭ ಉಪಾಧ್ಯಕ್ಷ ಬಿ.ಸಿ. ದಿನೇಶ್, ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್, ನಿರ್ದೇಶಕ ಆಲ್ಫ್ರೆಡ್ ಇದ್ದರು.