ಕೊಡಗು ಗೌಡ ಸಮಾಜದ ಪ್ರಮುಖರಿಂದ ಕಂದಾಯ ಸಚಿವರ ಭೇಟಿ – ಜಮೀನು ಮಂಜೂರಾತಿಗೆ ಮನವಿ

ಕೊಡಗು ಗೌಡ (Kodagu Gowda) ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ನೇತೃತ್ವದಲ್ಲಿ ಗೌಡ ಸಮುದಾಯದ ನಿಯೋಗ ಕಂದಾಯ ಸಚಿವ ಕೃಷ್ಣ ಬೈರೇಗೌಡರನ್ನು ಭೇಟಿ ಮಾಡಿ ಚರ್ಚಿಸಿತು. ಗೌಡ ಸಮಾಜಕ್ಕೆ ಭೂಮಿ ಮಂಜೂರು ಮಾಡುವಂತೆ ಈ ವೇಳೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಉಪಸ್ಥಿತರಿದ್ದರು. ನಿಯೋಗದಲ್ಲಿ ಕೊಲ್ಯದ ಗಿರೀಶ್, ಕುಯ್ಯಮುಡಿ ವಸಂತ, ದಂಬೆಕೋಡಿ ಆನಂದ, ಹುದೇರಿ ರಾಜೇಂದ್ರ, ಪೊನ್ನಚ್ಚನ ಮಧು, ಅಮೆ ಸೀತಾರಾಮ ಹಾಗೂ ಇನ್ನಿತರ ಪ್ರಮುಖರು ಇದ್ದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಪತ್ರಿಕಾ ಭವನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಅಭಿಪ್ರಾಯ ಪಟ್ಟರು. ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ. ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. […]
ಕಣಿವೆಯಲ್ಲಿ ಅಪಾಯಮಟ್ಟದಲ್ಲಿ ಹರಿಯುತ್ತಿರುವ ಕಾವೇರಿ – ತೂಗು ಸೇತುವೆ ಮೇಲೆ ಪ್ರವಾಸಿಗರ ಪ್ರವೇಶ ನಿರ್ಬಂಧ..!

ಕುಶಾಲನಗರ : ಜಿಲ್ಲಾದ್ಯಂತ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಕಣಿವೆ ಬಳಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಅಪಾಯಮಟ್ಟ ತಲುಪಿದೆ. ಹೀಗಾಗಿ ತೂಗುಸೇತುವೆ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಈ ಪ್ರದೇಶವನ್ನು ಪರಿಶೀಲಿಸಿ ತಹಸೀಲ್ದಾರ್ ಕಿರಣ್ ಗೌರಯ್ಯ, ತೂಗು ಸೇತುವೆ ಪ್ರವೇಶ ದ್ವಾರವನ್ನು ಬಂದ್ ಮಾಡಿಸಿದ್ದಾರೆ. ಸೇತುವೆ ಮೇಲೆ ಸಾರ್ವಜನಿಕರು ಅಪಾಯವನ್ನೂ ಲೆಕ್ಕಿಸದೆ ಓಡಾಡುತ್ತಾ, ಸೆಲ್ಫಿ ತೆಗೆದುಕೊಳ್ಳುತ್ತಾ ಇದ್ದರು. ಈ ಬಗ್ಗೆ ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡ ಅಧಿಕಾರಿಗಳು, […]
KMA: ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಾಯೋಜಕರ ನೆರವಿನಿಂದ ನೀಡಲಾಗುವ ಈ ಸಾಲಿನ ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್. ಸಿ. ಪರೀಕ್ಷೆಯ ‘ಕನ್ನಡ ವಿಷಯ’ದಲ್ಲಿ ಇಡೀ ಕೊಡಗು ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ “ಜಿಲ್ಲೆಯ ಸರಕಾರಿ ಶಾಲೆಯ” ಇಬ್ಬರು ವಿದ್ಯಾರ್ಥಿಗಳಿಗೆ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರು ತಮ್ಮ ದಿವಂಗತ ತಂದೆ ದುದ್ದಿಯಂಡ ಹುಸೈನಾರ್ […]
ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಇನ್ನು ಮುಂದೆ ಮಡಿಕೇರಿ ತಾಲೂಕು ತಾಲೂಕು ಬಂಟರ ಸಂಘದ ವತಿಯಿಂದ ಪ್ರತಿ ವರ್ಷ ನೀಡಲಾಗುವುದೆಂದು ಪ್ರಕಟಣೆ ತಿಳಿಸಿದೆ. 2023-24 ಮತ್ತು 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇಕಡ 90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ […]
ಕರಿಕೆ : ಮನೆ ಮೇಲೆ ಮರ ಬಿದ್ದು ಹಾನಿ – ಟಾರ್ಪಾಲ್ ವಿತರಿಸಿದ ಗ್ರಾಪಂ ಅಧ್ಯಕ್ಷ ಬಾಲಚಂದ್ರ ನಾಯರ್

ಕರಿಕೆ : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಹಲವೆಡೆ ಅನಾಹುತ ಸಂಭವಿಸುತ್ತಿದೆ. ಕರಿಕೆ ಚೆತ್ತುಕಾಯ ದೊಡ್ಡಚೇರಿ ಗ್ರಾಮದ ದಾಮೋದರ ಎಂಬವರ ಮನೆಗೆ ಮರ ಬಿದ್ದು ಮನೆಗೆ ಭಾಗಶಃ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಭೇಟಿ ನೀಡಿ ಪರಿಶೀಲಿಸಿದರು. ತಾತ್ಕಾಲಿಕ ಪರಿಹಾರವಾಗಿ ಮನೆಯ ಮೇಲೆ ಹಾಕಲು ಪಂಚಾಯಿತಿ ವತಿಯಿಂದ ವಿಶಾಲವಾದ ಟಾರ್ಪಾಲ್ ವಿತರಿಸಿದರು. ಮಳೆ ಕಡಿಮೆಯಾದ ನಂತರ ದುರಸ್ತಿಯ ಭರವಸೆ ನೀಡಿದರು.
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ – ಅಪಾಯದಿಂದ ಪಾರಾದ ಪತ್ರಕರ್ತ..!

ಕೊಡಗು : ವಾಹನದ ಮೇಲೆ ಮರ ಬಿದ್ದು ಪತ್ರಕರ್ತ ಜೀವಪಾಯದಿಂದ ಪಾರಾಗಿದ್ದಾರೆ. ಪ್ರತಿನಿಧಿ ಪತ್ರಿಕೆ ಸೋಮವಾರಪೇಟೆ ವರದಿಗಾರ ಡಿ. ಜಿ. ಶರಣ್ ಗೌಡ ಹರಗ ಶನಿವಾರ ರಾತ್ರಿ ಮನೆಗೆ ವಾಹನದಲ್ಲಿ ತೆರಳುತ್ತಿದ್ದಾಗ ಶಾಂತಳ್ಳಿ ರಸ್ತೆಯ ಜೆಡಿಗುಂಡಿ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಮಾರುತಿ ಒಮ್ನಿ ಕಾರಿನ ಮೇಲೆ ಮರ ಬಿದ್ದಿದೆ . ಕಾರು ತೀವ್ರವಾಗಿ ಜಖಂ ಆಗಿದೆ. ಕಾರಿನಲ್ಲಿ ಒಬ್ಬರೆ ಇದ್ದ ಕಾರಣ, ಮುಂಭಾಗಕ್ಕೆ ಹಾನಿಯಾಗದ ಹಿನ್ನೆಲೆ ಅಪಾಯದಿಂದ ಹೊರ ಬಂದರು. ಬರೆ ಕುಸಿತ ಉಂಟಾಗಿ ವಾಹನ ಸಂಚಾರ […]