ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.‌ ಪೊನ್ನಣ್ಣ

ಸಂಪಾಜೆ : ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಡಾವು ಬಳಿ ದುಗ್ಗಳ ಭಾಗದಲ್ಲಿ ೫ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಇತ್ತೀಚೆಗೆ ಉದ್ಘಾಟಿಸಿದರು. ಅದೇ ರೀತಿ ಬಂಟೋಡಿಯಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು. ಗ್ರಾಮ ವ್ಯಾಪ್ತಿಯ ಮುಖಂಡರು, ಸಾರ್ವಜನಿಕರು ಈ ಸಂದರ್ಭ ಉಪಸ್ಥಿತರಿದ್ದರು.

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ

ಮಡಿಕೇರಿ : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು. ಅರಣ್ಯ ಇಲಾಖೆ ಅಧಿಕಾರಿಗಳು […]

ರಸ್ತೆ ಸಮಸ್ಯೆಯಿಂದ ಅಪಘಾತ ಸಂಭವಿಸಿದರೆ ಅಧಿಕಾರಿಗಳ ವಿರುದ್ಧ ಸುಮೊಟೋ ಪ್ರಕರಣ – ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಎಚ್ಚರಿಕೆ

ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‌ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟಿಗಳನ್ನು ಕಡಿಯುವುದು, ರಸ್ತೆ […]

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಚ್‌.ಎಸ್.‌ ಚೇತನ್‌ ಅವರಿಗೆ ಅದ್ಧೂರಿ ಸ್ವಾಗತ..!

ಕುಶಾಲನಗರ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗಿನ ಎಚ್‌.ಎಸ್.‌ ಚೇತನ್‌ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಬಳಿಕ ಜಿಲ್ಲೆಗೆ ಆಗಮಿಸಿದ ಅವರನ್ನು ನೂರಾರು ಬೆಂಬಲಿಗರು, ಬಂಧುಗಳು, ಸಹೋದ್ಯೋಗಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಕುಶಾಲನಗರಕ್ಕೆ ಆಗಮಿಸಿದ ವೇಳೆ ಅಲ್ಲಿ ಸೇರಿದ್ದ ನೂರಾರು ಮಂದಿ ಹೂವಿನ ಹಾರ ಹಾಕಿ ಅಭಿನಂದಿಸಿ ಸ್ವಾಗತಿಸಿದರು. ಕುಶಾಲನಗರ ಬಳಿಯ ಹೇರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಚೇತನ್‌ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಗೊಳಿಸುವಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದವರು. ಇದೀಗ ರಾಜ್ಯಮಟ್ಟದ […]

ಕಾರ್ಗಿಲ್‌ ವಿಜಯ್‌ ದಿವಸ್‌ – ಹುತಾತ್ಮ ಯೋಧರಿಗೆ ಮಡಿಕೇರಿಯಲ್ಲಿ ಭಾವಪೂರ್ಣ ಗೌರವಾರ್ಪಣೆ

ಕಾರ್ಗಿಲ್‌ ವಿಜಯ್‌ ದಿವಸ್‌ ಅಂಗವಾಗಿ ಮಡಿಕೇರಿಯಲ್ಲಿ ವಿಶೇಷ ಕಾರ್ಯಕ್ರಮ ಜರುಗಿತು. ವಿವಿಧ ಸಂಘ ಸಂಸ್ಥೆಗಳ ಸಹಕಾರದೊಮದಿಗೆ ಕೊಡಗು ಪತ್ರಕರ್ತರ ಸಂಘ ಗೌಡ ಸಮಾಜ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿದೆಡೆಯ ಮಂದಿ ಪಾಲ್ಗೊಂಡು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. 75 ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಮರ್ ಜವಾನ್ ಸ್ಮಾರಕದ ಪ್ರತಿರೂಪಕ್ಕೆ ಪುಪ್ಪಾರ್ಚನೆ ಮಾಡಿ, ಹಣತೆ ಬೆಳಗಿ ಯೋಧರಿಗೆ ಭಾವಪೂಣ೯ ಗೌರವ ನಮನ ಸಲ್ಲಿಸಿದರು. ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪ ಅವರ ಪತ್ನಿ ಪೆಮ್ಮಂಡ ಶೋಭಾ ಕಾವೇರಪ್ಪ […]