ಕೊಡಗು ಜಿಲ್ಲೆಯ ಮಳೆ ವಿವರ: ಇನ್ನೆಷ್ಟು ದಿನ ಮಳೆ ಅಬ್ಬರಿಸಲಿದೆ?

ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.66 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 117.40 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2116.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2113.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.10 ಮಿ.ಮೀ. ಕಳೆದ ವರ್ಷ ಇದೇ ದಿನ 180.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3165.92 ಮಿ.ಮೀ, ಕಳೆದ ವರ್ಷ […]
ವಿರಾಜಪೇಟೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಕಾರು ವಿರಾಜಪೇಟೆ ಕಾವೇರಿ ಕಾಲೇಜಿನ ಸಮೀಪ ತಿರುವಿನಲ್ಲಿ ಅಪಘಾತಕ್ಕೀಡಾಗಿದ್ದು ಜಿಲ್ಲಾಧ್ಯಕ್ಷರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂತಾರಾಷ್ಟ್ರೀಯ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿ: ಕೊಡಗಿನ ತಂಡಕ್ಕೆ ಚಿನ್ನ

ಕೇರಳದ ತಿರುವನಂತಪುರಂನಲ್ಲಿ ನಡೆದ ಸ್ಟಿಫನ್ ಜಾಕೋಬ್ ಕೋಶಿ ಅಂತಾರಾರಾಷ್ಟ್ರೀಯ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾರತೀಯ ಟೆಕ್ ಸಿಲ್ಕೋ ತಂಡವನ್ನು ಪ್ರತಿನಿಧಿಸಿದ್ದ ಕೊಡಗಿನ ಹಿರಿಯ ಬಾಸ್ಕೆಟ್ ಬಾಲ್ ತಂಡ ಮೂರು ಚಿನ್ನದ ಪದಕ ಗೆದ್ದಿದ್ದಾರೆ. 55 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಒಂದು, 60 ವರ್ಷ ಮೇಲ್ಪಟ್ಟದ ತಂಡದಲ್ಲಿ ಒಂದು ಮತ್ತು 65 ವರ್ಷ ಮೇಲ್ಪಟ್ಟ ತಂಡದಲ್ಲಿ ಒಂದು ಚಿನ್ನದ ಪದಕ ಬಾಚಿಕೊಂಡಿದ್ದಾರೆ.
ಇಂಜಲಗೆರೆಯ ಕಾಫಿ ತೋಟದಲ್ಲಿ ವ್ಯಾಘ್ರನ ಹೆಜ್ಜೆ ಗುರುತು ಪತ್ತೆ – ಆತಂಕದಲ್ಲಿ ಗ್ರಾಮಸ್ಥರು..!

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಒಂದೆಡೆ ಕಾಡಾನೆ ಉಪಟಳ ನಿರಂತರವೆಂಬಂತಾಗಿದೆ. ಈ ನಡುವೆ ಅಲ್ಲಲ್ಲಿ ಹುಲಿಗಳ ದರ್ಶನವಾಗುತ್ತಿದ್ದು, ಅರಣ್ಯದಂಚಿನ ಜನರ ನಿದ್ದೆಗೆಡಿಸಿದೆ. ಇಂಜಲಗೆರೆ ಗ್ರಾಮದಲ್ಲಿ ಹುಲಿಯ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಗ್ರಾಮದ ಮಂಡೇಪಂಡ ಪ್ರವೀಣ್ ಬೋಪಯ್ಯ ಅವರ ಕಾಫಿ ತೋಟದಲ್ಲಿ ಮಂಗಳವಾರ ಹೆಜ್ಜೆಗುರುತು ಕಂಡಿದೆ. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೆಲವು ದಿನದ ಹಿಂದೆ ಸಿದ್ದಾಪುರ ಬಳಿಯ ಕರಡಿಗೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿತ್ತು. ಬಾಣಂಗಾಲ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿಗೆ ಜಾನುವಾರು ಮೃತಪಟ್ಟಿದ್ದವು. […]
ಡಾ. ಕೆ.ಬಿ. ಸೂರ್ಯಕುಮಾರ್ ಅವರ ಪುಸ್ತಕಕ್ಕೆ ರಾಜ್ಯಮಟ್ಟದ ಶ್ರೇಷ್ಠ ವೈದ್ಯೇತರ ಕೃತಿ ಪ್ರಶಸ್ತಿ

ಮಡಿಕೇರಿ : ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆ, ಕನ್ನಡ ವೈದ್ಯಕೀಯ ಬರಹಗಾರರ ಸಮಿತಿ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗೆ ಕೊಡಗಿನ ಹಿರಿಯ ವೈದ್ಯ, ಸಾಹಿತಿ ಡಾ. ಕೆ.ಬಿ. ಸೂರ್ಯಕುಮಾರ್ ಭಾಜನರಾಗಿದ್ದಾರೆ. ಸೂರ್ಯಕುಮಾರ್ ಅವರು ಬರೆದ ಮಂಗಳಿ ಕೃತಿಗೆ ಡಾ. ಕೆ. ಶ್ಯಾಮ್‌ಪ್ರಸಾದ್ ಶ್ರೇಷ್ಠ ವೈದ್ಯೇತರ ಕೃತಿ ಪ್ರಶಸ್ತಿ ಲಭಿಸಿದೆ. ಕೆ. ಶ್ಯಾಮ್‌ಪ್ರಸಾದ್ ಶ್ರೇಷ್ಠ ವೈದ್ಯ ಕೃತಿ ಪ್ರಶಸ್ತಿಗೆ ಡಾ. ಕೆ.ಎಸ್. ಶ್ರಿಧರ್ ಅವರ ʼಚಿತ್ತ ಚಾಂಚಲ್ಯʼ ಕೃತಿ, ಡಾ. ಸುನಂದಾ ಕುಲಕರ್ಣಿ ಶ್ರೇಷ್ಠ ವೈದ್ಯಕೀಯ […]