ನಾಟಿ ಔಷಧಿ ಸೊಪ್ಪಿನ ರಸ ಕುಡಿಸುವುದರಿಂದ ಮಕ್ಕಳ ಸಾವಿನ ಪ್ರಮಾಣ ಹೆಚ್ಚಳ : ಡಾ.ಮಧುಸೂದನ್‌ ಆತಂಕ

ಮಡಿಕೇರಿ : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ ೨ ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಉಣಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಹೇಳಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ಬುಧವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎದೆಹಾಲಿನ ಮಹತ್ವ […]

ಧರಾಲಿಯಲ್ಲಿ ಭೀಕರ ಭೂಕುಸಿತ – 70ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ ಭಾರತೀಯ ಸೇನೆ…

ಉತ್ತರಾಖಂಡ : ಉತ್ತರಾಖಂಡದ ಧರಾಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿರುವವರ ರಕ್ಷಣೆಗೆ ಸೇನೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಬುಧವಾರ ಮಧ್ಯಾಹ್ನವರೆಗೆ 70ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ ಎಂದು ಸೇನೆ ತಿಳಿಸಿದೆ. ಗಂಗೋತ್ರಿ ಮತ್ತು ಧರಾಲಿಯಲ್ಲಿ ಎರಡು ಹೆಚ್ಚುವರಿ ರಕ್ಷಣಾ ಮತ್ತು ಪರಿಹಾರ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಭೂಕುಸಿತಕ್ಕೊಳಗಾದ ಪ್ರದೇಶಕ್ಕೆ ತಲುಪಲು ತಾತ್ಕಾಲಿಕ ರಸ್ತೆ ನಿರ್ಮಿಸಿಕೊಂಡು ತೆರಳಲಾಗುತ್ತಿದೆ. ಕಾರ್ಯಾಚರಣೆಗೆ ವಿವಿಧ ಯಂತ್ರೋಪಕರಣಗಳನ್ನೂ ಬಳಸಲಾಗುತ್ತಿದೆ. ಸಿಲುಕಿಕೊಂಡಿರುವ ನಾಗರಿಕರನ್ನು ಪತ್ತೆಹಚ್ಚಲು ಡ್ರೋನ್‌ಗಳು ಮತ್ತು ರಕ್ಷಣಾಪಡೆಯ ಶ್ವಾನಗಳನ್ನು ಬಳಸಿಕೋಳ್ಳಲಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿದ […]

‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ದೇಶಾದ್ಯಂತ ವಿಶೇಷ ಅಭಿಯಾನ – ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಸರ್ವೋಚ್ಛ ನ್ಯಾಯಾಲಯ ದೇಶಾದ್ಯಂತ ಅಕ್ಟೋಬರ್ ೦೭ ರವರೆಗೆ ೯೦ ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ ೯೦ ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ […]

ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್‌ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. ೦೮೨೭೨-೨೨೦೯೮೬ ಅಥವಾ ೯೪೮೦೦೩೨೭೧೨ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

ನಿಮ್ಮ ಶಾಲೆ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದ್ಯಾ..? ಸರ್ಕಾರದಿಂದ ಸಿಗುತ್ತೆ ಪ್ರೋತ್ಸಾಹ ಧನ – ನೀವೇನ್‌ ಮಾಡ್ಬೇಕು ಗೊತ್ತಾ..?

ಮಡಿಕೇರಿ : ರಾಜ್ಯ ಯುವನೀತಿ-೨೦೧೨ ಅನುಷ್ಠಾನ ಅಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ೨೦೧೭-೧೮ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.೧ ಲಕ್ಷದಂತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಅನುದಾನದಲ್ಲಿ […]

ಕೊಡಗು ಜಿಲ್ಲೆಯಲ್ಲಿ ಕಂಬಳ, ಎತ್ತಿನ ಬಂಡಿ ಓಟ, ಮಲ್ಲಕಂಬ ಕ್ರೀಡಾಕೂಟಕ್ಕೆ ಸರ್ಕಾರದಿಂದ ಸಿದ್ಧತೆ..! ಇಲ್ಲಿದೆ ನೋಡಿ

ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ ೨೦೨೫-೨೬ ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು ಕೊಡಗು ಜಿಲ್ಲೆಯಲ್ಲಿ ಆಸಕ್ತಿ ಹೊಂದಿರುವ ಸಂಘ ಸಂಸ್ಥೆಗಳು ಒಂದು ವಾರದ ಒಳಗೆ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ದೂ.ಸಂ.೯೪೮೦೦೩೨೭೧೨ ಅಥವಾ […]

ಉದ್ಯಮಿ ಕುಂಜಿಲ ಯೂಸುಫ್ ನಿಧನ

ನಾಪೋಕ್ಲು ಕಕ್ಕಬ್ಬೆ ಬಳಿಯ ಕುಂಜಿಲ ಗ್ರಾಮದ ನಿವಾಸಿ ಹಲವು ವರ್ಷಗಳ ಹಿಂದೆ ಜಿಲ್ಲೆಯ ವಿವಿಧೆಡೆ ಸಂಚರಿಸುತ್ತಿದ್ದ ಐಡಿಯಲ್ ಬಸ್ಸಿನ ಮಾಲೀಕರಾಗಿದ್ದ ಕುಂಜಿಲ ಯೂಸುಫ್ (60)ರವರು ನಿಧನರಾಗಿದ್ದಾರೆ. ಮೃತರ ದಫನ ಕಾರ್ಯವು ಇಂದು ಮದ್ಯಾಹ್ನ ಕುಂಜಿಲ ಪೈನರಿ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.