ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ: ಎ.ಎಸ್.ಪೊನ್ನಣ್ಣ

ಮಡಿಕೇರಿ:- ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕøತಿ ಮತ್ತು ಕ್ರೀಡಾ ಅಸೋಷಿಯೇಷನ್ ಇವರ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಗುರುವಾರ […]
ವಿರಾಜಪೇಟೆ ಕಾವೇರಿ ಕಾಲೇಜು ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

ಆಧುನಿಕ ಜೀವನ ಶೈಲಿಯಿಂದ ಕೃಷಿ ಭೂಮಿಯಿಂದ ದೂರ ಉಳಿದ ಯುವ ಜನತೆ ಒಂದು ದಿನವಾದರೂ ಕೃಷಿ ಭೂಮಿಯ ಸಂಪರ್ಕಕ್ಕೆ ಬಂದು ರೈತಾಪಿ ಬದುಕಿನ ಅನುಭವ ಪಡೆಯಬೇಕು ಎಂದು ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಟ್ಟಂಗಾಲದ ನಿವೃತ್ತ ಪೋಲಿಸ್ ಉನ್ನತಾಧಿಕಾರಿ.ಬಿ.ಡಿ.ಮಂದಪ್ಪ ರವರ ಗದ್ದೆಗಳಲ್ಲಿ ಬುಧವಾರ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದ ಅವರು ಇತ್ತೀಚಿನ ವರ್ಷದಲ್ಲಿ ಯುವಜನತೆ ಕೃಷಿ ಭೂಮಿಯಿಂದ ದೂರ ಸರೆಯುತಿದ್ದು, […]
ಕುಶಾಲನಗರದಲ್ಲಿ ಸ್ತನ್ಯಪಾನ ಸಪ್ತಾಹ – ಸೊಪ್ಪಿನ ರಸಗಳನ್ನು ಮಕ್ಕಳಿಗೆ ಕುಡಿಸಬೇಡಿ – ಕರೆ ನೀಡಿದ ಪ್ರಮುಖರು

ಕುಶಾಲನಗರ : ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರದ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಇಂದುಧರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ಸಂಪೂರ್ಣವಾಗಿ ತಿಳಿದಿರುವುದಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಿ ತಾಯಂದಿರನ್ನು ಹಾಲುಣಿಸಲು ಪ್ರೇರೇಪಿಸಲು ಮತ್ತು ತಾಯಿ ಮತ್ತು ಮಗುವಿಗೆ ಆಗುವ ಪ್ರಯೋಜನವನ್ನು ಉತ್ತೇಜಿಸಲು ಸಪ್ತಾಹವನ್ನು ಆಚರಿಸಲಾಗುತ್ತದೆ. ಇದು ಕೇವಲ ಒಂದು ವಾರದ ಆಚರಣೆಯಾಗಬಾರದು. ಪ್ರತಿ […]
20 ವರ್ಷ ಕಳೆದರೂ ಇನ್ನೋವಾ ಕಾರಿಗೆ ಏಕಿಷ್ಟು ಡಿಮ್ಯಾಂಡ್ ಗೊತ್ತಾ?

ಭಾರತದಲ್ಲಿ ಟೊಯೊಟಾ ಇನ್ನೋವಾ (Toyota Innova) ಬಿಡುಗಡೆಯಾಗಿ 20 ವರ್ಷಗಳನ್ನು ಪೂರ್ಣಗೊಳಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಈ ಇನ್ನೋವಾ ಕಾರು ಲಕ್ಷಾಂತರ ಭಾರತೀಯ ಕುಟುಂಬಗಳು ಮತ್ತು ವ್ಯವಹಾರಗಳಿಗೆ ವಿಶ್ವಾಸಾರ್ಹ ಒಡನಾಡಿಯಾಗಿ ಬೆಳೆದಿದೆ. ಇನ್ನೋವಾ, ಇನ್ನೋವಾ ಕ್ರಿಸ್ಟಾ ಮತ್ತು ಇನ್ನೋವಾ ಹೈಕ್ರಾಸ್ ಎಂಬ ಮೂರು ಕಾರುಗಳು ಒಟ್ಟಾರೆಯಾಗಿ ಇಲ್ಲಿಯವರೆಗೆ 12 ಲಕ್ಷಕ್ಕೂ ಹೆಚ್ಚು ಯುನಿಟ್ ಗಳನ್ನು ಮಾರಾಟ ಮಾಡಲಾಗಿದ್ದು, ಬ್ರ್ಯಾಂಡ್ ಅಚಲ ಗ್ರಾಹಕ ನಂಬಿಕೆ ಮತ್ತು ಶಾಶ್ವತ ಮೌಲ್ಯದ ಸಂಕೇತವಾಗಿದೆ ಎಂದು ಟೊಯೋಟಾ ಹೆಮ್ಮೆ ವ್ಯಕ್ತಪಡಿಸಿದೆ. 2016 ರಲ್ಲಿ ಟೊಯೊಟಾ […]
ಮದೆ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ

ಮಡಿಕೇರಿ:- ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕೆನರಾ ಬ್ಯಾಂಕ್, ಮೈನ್ ಬ್ರಾಂಚ್, ಮಡಿಕೇರಿ ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲೂಕಿನ ಮದೆ ಗ್ರಾಮದಲ್ಲಿ, ಮದೆ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಇತ್ತೀಚೆಗೆ ಮದೆ ಗ್ರಾಮದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ಎಜಿಎಂ ರವರಾದ ರಾಜೇಶ್ ಕುಮಾರ್ ವಿ. ಅವರು ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ […]
ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ವಿಜಯ್ ಕೊನೆಯುಸಿರು..!

ಮಡಿಕೇರಿ : ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ನಿಧನರಾಗಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್‌ನ DAR ನಲ್ಲಿ ಪೊಲೀಸ್ ಬ್ಯಾಂಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ್ ಮೃತ ಸಿಬ್ಬಂದಿ.ಇವರು ಫೊಲೀಸ್ ಮೈತ್ರಿ ಭವನದ ಮೇಲ್ವಿಚಾರಕರಾಗಿಯೂ ಕಾರ್ಯ ನಿರ್ವಹಿ ಚಿರಪರಿಚಿತರಾಗಿದ್ದರು. ಸದಾ ಹಸನ್ಮುಖಿಯಾಗಿದ್ದ ಇವರ ಅಕಾಲಿಕ ನಿಧನ ಇಲಾಖಾ ಸಿಬ್ಬಂದಿ ಹಾಗೂ ಸ್ನೇಹಿತ ಬಳಗಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.