7.80 ಕೆಜಿ ಗಾಂಜಾ ಕೇರಳಕ್ಕೆ ಸಾಗಾಟ ಯತ್ನ – ಮಾಲು ಸಹಿತ ಆರೋಪಿಗಳು ವಶಕ್ಕೆ..!

ಮಡಿಕೇರಿ : ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೀರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಹುಣಸೂರಿನ ವಿಜಯನಗರದ ಅನೀಸ್ ಅಹಮದ್(45), ಹುಣಸೂರು ಪಟ್ಟಣದ ಸ್ಕೋರ್ ಬೀದಿ ನಿವಾಸಿ ಚೇತನ್(40) ಬಂಧಿತರು. ಗಾಂಜಾವನ್ನು ಕೇರಳಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ಮಾಡಿದ್ದಾರೆ. ಬಂಧಿತರಿಂದ 7 ಕೆಜಿ 872 ಗ್ರಾಂ ತೂಕದ(2,50,000 ರೂ. ಮೌಲ್ಯದ) ಗಾಂಜಾ, ಸ್ವಿಫ್ಟ್ ಕಾರು, ಒಂದು ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಪಡಿಸಲಾಗಿದೆ.
ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆ.೧೨ಕ್ಕೆ

ಮಡಿಕೇರಿ : ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆಗಸ್ಟ್ ೧೨ ರಂದು ಬೆಳಗ್ಗೆ ೯ ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಲಿದೆ. ಪ್ರಾಧಿಕಾರದ ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ಜವಾಹರ್ ನವೋದಯ ವಿದ್ಯಾಲಯ ೧೧ ನೇ ತರಗತಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೫-೨೬ ನೇ ಸಾಲಿನ ಖಾಲಿ ಇರುವ ೧೧ ನೇ ತರಗತಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸಿಬಿಎಸ್‌ಇ ಅಥವಾ ಮಾನ್ಯತೆ ಪಡೆದ ರಾಜ್ಯ ಮಂಡಳಿಯಿAದ ಹತ್ತನೇ ತರಗತಿ ಪಾಸಾಗಿದ್ದು, ಕನಿಷ್ಠ ಶೇ.೬೦ ಅಂಕಗಳನ್ನು ಪಡೆದಿರಬೇಕು. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಕನಿಷ್ಠ ೬೦ ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಆನ್‌ಲೈನ್ ಮತ್ತು ಆಪ್‌ಲೈನ್ ಎರಡು ಮಾರ್ಗಗಳಲ್ಲಿ ಅವಕಾಶವಿದ್ದು, […]
ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಡಳಿತ ಮನವಿ – ಏನು ಮಾಡ್ಬೇಕು? ಏನು ಮಾಡ್ಬಾರ್ದು..? ಇಲ್ಲಿದೆ ನೋಡಿ ಗೈಡ್ಲೈನ್ಸ್

ಮಡಿಕೇರಿ : ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿನಾಂಕ ೨೦-೦೭-೨೦೧೬ ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ […]
Power Cut: ನಾಳೆ ಕೊಡಗಿನ ಹಲವೆಡೆ ವಿದ್ಯುತ್ ಕಡಿತ: ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್

66/11 ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಲ್ಲಿ ನಾಳೆ ಬೆಳಗ್ಗೆ 10.00 ರಿಂದ 5.00 ಗಂಟೆಯವರಗೆ ನಿರ್ವಹಣಾ ಕಾಮಗಾರಿ ನಡೆಯುವ ಕಾರಣದಿಂದ ಮಡಿಕೇರಿ ನಗರ, ರಾಜಾಸೀಟ್ ರಸ್ತೆ, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಒಂಕಾರೇಶ್ವರ, ಜೆ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೊಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬಟ್ಟಗೇರಿ, ಕೆ.ಬಾಡಗ, ಬೆಟ್ಟಗೆರಿ, ಚೆಟ್ಟಿಮಾಣಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಸಹಕಾರ ಸಚಿವ ಕೆ.ಎನ್. ರಾಜಣ್ಣ ರಾಜೀನಾಮೆ – ಪಕ್ಷ ವಿರೋಧಿ ಹೇಳಿಕೆಗೆ ಬೆಲೆ ತೆತ್ತ ಸಚಿವ..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮನೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಅವರು ರಾಜೀನಾಮೆ ನೀಡಿದ್ದಾರೆಂದು ತಿಳಿದು ಬಂದಿದೆ. ಕೆಲವು ದಿನದ ಹಿಂದೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದರು. ಇದಕ್ಕೆ ವಿರುದ್ಧವಾಗಿ ರಾಜಣ್ಣ ತಮ್ಮ ಹೇಳಿಕೆ ನೀಡಿದ್ದರು. ಇದು ಹೈಕಮಾಂಡ್ ನಾಯಕರನ್ನು ಕೆರಳಿಸಿತ್ತು. ತಕ್ಷಣ ಅವರಿಂದ ರಾಜೀನಾಮೆ ಪಡೆಯವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರಿಷ್ಠರು ಸೂಚಿದ್ದರು. ಅದರ […]
ನವೆಂಬರ್ 18-20ರವರೆಗೆ ಬೆಂಗಳೂರು ಟೆಕ್ ಸಮ್ಮಿತ್-2025 : ಕಂಪನಿಗಳ ಪ್ರಮುಖರೊಂದಿಗೆ ಸಿಎಂ Breakfast Meet

ಬೆಂಗಳೂರು : ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ CEOಗಳ ಜೊತೆ Breakfast Meetನಲ್ಲಿ ಪಾಲ್ಗೊಂಡರು. DCM ಡಿ.ಕೆ.ಶಿವಕುಮಾರ್, ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. “Futurise” “ಭವಿಷ್ಯೋದಯ” ಧ್ಯೇಯವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿದಲಾಗುತ್ತಿದೆ.