ಅಂಗಾಂಗ ದಾನದ ನಾಯಕತ್ವದತ್ತ ಕರ್ನಾಟಕದ ಪಯಣ – ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನದಲ್ಲಿ ಭಾಗಿಯಾಗಿ…

  ಲೇಖನ : ಡಾ. ಸುನೀಲ್‌ ಕಾರಂತ್‌, ಬೆಂಗಳೂರು ಅಂಗಾಂಗ ದಾನದ ಪ್ರತಿಜ್ಞೆ ಮಾಡುವಲ್ಲಿ ಕರ್ನಾಟಕವು ಈಗ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಇದು ಹೆಮ್ಮೆಯ ಸಂಗತಿಯಾಗಿದ್ದು, ಜೀವ ಉಳಿಸುವ ಈ ಕಾರ್ಯದ ಬಗ್ಗೆ ಜಾಗೃತಿ ನಿಧಾನವಾಗಿ ಬೆಳೆಯುತ್ತಿದೆ ಎಂಬುದನ್ನು ತೋರಿಸುತ್ತದೆ. ಆದರೆ, ಸಾಗಬೇಕಾದ ದಾರಿ ಇನ್ನೂ ಬಲು ದೂರವಿದೆ. ಪ್ರತಿದಿನ ನಮ್ಮ ಆಸ್ಪತ್ರೆಯಲ್ಲಿ ಹೃದಯ, ಯಕೃತ್ತು, ಮೂತ್ರಪಿಂಡ, ಶ್ವಾಸಕೋಶ ಅಥವಾ ಕರುಳು ಕಸಿಗಾಗಿ ರೋಗಿಗಳು ಹತಾಶೆಯಿಂದ ಕಾಯುತ್ತಿರುವುದನ್ನು ನಾವು ನೋಡುತ್ತೇವೆ. ಅವರಲ್ಲಿ ಅನೇಕರಿಗೆ ಬಹಳ ಸಮಯ ತಗಲುತ್ತದೆ. […]

ಮಡಿಕೇರಿ ಜಿಲ್ಲಾಸ್ಪತ್ರೆಗೆ ಹೆಚ್ಚುವರಿ ಕಟ್ಟಡ – ಆಗಸ್ಟ್‌ 15ಕ್ಕೆ ಗಣ್ಯರಿಂದ ಶಂಕುಸ್ಥಾಪನೆ – ಡಾ. ಮಂತರ್‌ ಗೌಡ ಮಾಹಿತಿ

ಮಡಿಕೇರಿ : ನಗರದಲ್ಲಿರುವ ಬೋಧಕ ಆಸ್ಪತ್ರೆಗೆ(ಜಿಲ್ಲಾಸ್ಪತ್ರೆ) ಹೆಚ್ಚುವರಿ ಕಟ್ಟಡ ಕಾಮಗಾರಿಗೆ ನಾಳೆ ಶಿಲಾನ್ಯಾಸ ನಡೆಯಲಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ ಗೌಡ ತಿಳಿಸಿದ್ದಾರೆ. 41 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಉಳಿಕೆ ಮತ್ತು ಹೆಚ್ಚುವರಿ(ಎರಡನೇ ಹಂತ) ಕಾಮಗಾರಿ ಆರಂಭಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಸನ್ಮಾನ್ಯ ಡಾ. ಶರಣಪ್ರಕಾಶ ಪಾಟೀಲ, ಕೊಡಗು ಜಿಲ್ಲಾ ಉಸ್ತುವಾರಿ […]

ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯ ಮಳೆ ವಿವರ

Kodagu rain

ಮಡಿಕೇರಿ:- ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 17.47 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 39.92 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2235.59 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2383.19 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.28 ಮಿ.ಮೀ. ಕಳೆದ ವರ್ಷ ಇದೇ ದಿನ 76.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3372.82 ಮಿ.ಮೀ, ಕಳೆದ ವರ್ಷ ಇದೇ […]

ರೇಣುಕಾಸ್ವಾಮಿ ಕೊ*ಲೆ ಕೇಸ್‌ – ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು – ದರ್ಶನ್‌ & ಗ್ಯಾಂಗ್‌ಗೆ ಮತ್ತೆ ಜೈಲೇ ಗತಿ..!

ದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ನ ಜಾಮೀನು ರದ್ದಾಗಿದೆ.   ನಟ ದರ್ಶನ್(Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿ ಎಲ್ಲಾ ಆರೋಪಿಗಳ ಜಾಮೀನು (Bail) ರದ್ದು ಮಾಡಬೇಕೆಂದು ಕೋರಿ ಕರ್ನಾಟಕ ಪೊಲೀಸರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಇಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳ ಜಾಮೀನು ರದ್ದುಗೊಳಿಸಿದೆ.   ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿರುವ ನ್ಯಾಯಾಲಯ, ತಕ್ಷಣದಲ್ಲೇ ಬಂಧಿಸಿ ಜೈಲಿಗೆ ಕಳುಹಿಸುವಂತೆ ಹೇಳಿದೆ. ಹೈಕೋರ್ಟ್‌ ನೀಡಿದ್ದ ತೀರ್ಪಿನ ಬಗ್ಗೆ […]