ಸ್ವಾತಂತ್ರ್ಯ ದಿನ ರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಮಹತ್ವದಾಗಿದ್ದು – ಪ್ರೊ. ಅಶೋಕ ಸಂಗಪ್ಪ ಆಲೂರ

ಕುಶಾಲನಗರ(kushalanagar) : ನಮ್ಮ ಭಾರತ ದೇಶದ ಸ್ವಾತಂತ್ರ್ಯದ ದಿನವು ರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಮಹತ್ವದಾಗಿದ್ದು, ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ದೇಶ ವಿಮೋಚನೆ ಹೊಂದಿದ ಸರ್ವ ಶ್ರೇಷ್ಠ ದಿನವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ(Ashoka sangappa Aloora) ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದಂತಹ ಅದಮ್ಯ ಚೈತನ್ಯಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ, […]
ಹೆಗ್ಗಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವ ಸಂಭ್ರಮ

ವೀರಾಜಪೇಟೆ : ಹೆಗ್ಗಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ ನೆರವೇರಿಸಿದರು. ಧ್ವಜವಂದನೆಯನ್ನು ಕಾಫಿ ಬೆಳೆಗಾರರಾದ ಕೋಡಿರ ಟಿ. ಗಣಪತಿ ನೆರವೇರಿಸಿದರು. ಶಾಲೆಯ ಸಹ ಶಿಕ್ಷಕಿ ಕಮರುನ್ನಿಸ, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರುಗಳು, ಶಾಲೆಯ ಸಿಬ್ಬಂದಿ, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸ್ವಾತಂತ್ರ್ಯೋತ್ಸವ ಅಂಗವಾಗಿ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸ್ವಾತಂತ್ರ್ಯೋತ್ಸವ ಅಂಗವಾಗಿ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕಂಡಂಗಾಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವಿರಾಜಪೇಟೆ : 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಂಡಂಗಾಲದ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಬೇರಳಿನಾಡು ವತಿಯಿಂದ ಶುಕ್ರವಾರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಂಡಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದ ನೇತೃತ್ವವನ್ನು ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಸುಬ್ಬಯ್ಯ ವಹಿಸಿದ್ದರು. ಇದಕ್ಕೂ ಮೊದಲು ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿತು. ಮೂಕಚಂಡ ಪ್ರಸನ್ನ ಸುಬ್ಬಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಧ್ಯಾಹ್ನದವರೆಗೆ ಶಾಲಾ ಆವರಣವನ್ನು ಸಂಸ್ಥೆಯ […]
ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ವಿರಾಜಪೇಟೆ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ. ಎಂ. ಎ.) ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೆ. ಎಂ. ಎ. ಪ್ರಧಾನ ಕಛೇರಿಯಿರುವ ವಿರಾಜಪೇಟೆಯ ಮುಖ್ಯ ರಸ್ತೆಯ ಡಿ.ಹೆಚ್.ಎಸ್. ಕಟ್ಟಡದ ಮುಂಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ಕೆ. ಎಂ. ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಧ್ವಜಾರೋಹಣ ನೆರವೇರಿಸಿದರು. ನಂತರ ಧ್ವಜ ವಂದನೆಗಳೊಂದಿಗೆ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಲಾಯಿತು. ಬಳಿಕ ಮಾತನಾಡಿದ ದುದ್ದಿಯಂಡ ಎಚ್. ಸೂಫಿ ಹಾಜಿ, ರಾಷ್ಟ್ರಪಿತ ಮಹಾತ್ಮ ಗಾಂಧೀ ಸೇರಿದಂತೆ ಹಲವಾರು ಕ್ರಾಂತಿಕಾರಿ […]
ಗೋಣಿಕೊಪ್ಪ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಗೋಣಿಕೊಪ್ಪ : ಗೋಣಿಕೊಪ್ಪ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಕುಲ್ಲಚಂಡ ಪ್ರಮೋದ್ ಗಣಪತಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯರು ಹಾಗೂ ಸ್ವಾತಂತ್ರ್ಯ ಹೋರಾಟಗಾರ ಟ್ರಸ್ಟ್ ಸಂಚಾಲಕ ಅಜಿತ್ ಅಯ್ಯಪ್ಪ ಧ್ವಜಾರೋಹಣ ನೆರವೇರಿಸಿದರು. ಸಮೀರ್ ಮುಖ್ಯ ಭಾಷಣ ಮಾಡಿದರು. ಗೋಣಿಕೊಪ್ಪ ಕಾಂಗ್ರೆಸ್ ಉಪಾಧ್ಯಕ್ಷ ನಾಯಂಡಿರ ಶಿವಾಜಿ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಂಶಿಫ್, ಪಂಚಾಯಿತಿ ಸದಸ್ಯರಾದ ಚೆಪ್ಪುಡಿರ ಧ್ಯಾನ್ ದೇವಯ್ಯ , ಗೋಣಿಕೊಪ್ಪಲು ಗ್ರಾಮ ಪಂಚಾಯತಿ […]
ಎಂ. ಬಾಡಗ 01 ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

ಮೂರ್ನಾಡು : ಎಂ ಬಾಡಗ 1 ಅಂಗನಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಧ್ವಜದೊಂದಿಗೆ ಫೋಟೋ ಕ್ಲಿಕ್ ಮಾಡಿ ಅಪ್ಲೋಡ್ ಮಾಡಿದರು. ಕೇಂದ್ರದ ವಿದ್ಯಾರ್ಥಿಗಳಿಗೆ ತಿರಂಗ್ ಬ್ಯಾಡ್ಜ್ ವಿತರಿಸಲಾಯಿತು. ಮಕ್ಕಳು ಹಾಗೂ ಕೇಂದ್ರದ ಸಿಬ್ಬಂದಿ ದೇಶಭಕ್ತಿ ಗೀತೆ ಹಾಡಿದರು. ದಿನದ ಸಂಭ್ರಮದ ಪ್ರಯುಕ್ತ ಸಿಹಿ ವಿತರಿಸಲಾಯಿತು.