ನಿವೃತ್ತರಾದ ಪಿಎಸ್‌ಐ ಮತ್ತು ಎಎಸ್ಐಗೆ ಜಿಲ್ಲಾ ಪೊಲೀಸ್‌ ವತಿಯಿಂದ ಬೀಳ್ಕೊಡುಗೆ…

ಮಡಿಕೇರಿ : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಪಿಎಸ್ಐ ‌ಹೆಚ್.ಇ. ವೆಂಕಟ್ ಮತ್ತು ಎಎಸ್‌ಐ ಕೆ.ಪಿ. ಮಾಚಯ್ಯ ಅವರು ವಯೋ ನಿವೃತ್ತಿ ಹೊಂದಿದ್ದಾರೆ. ಇವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಎಸ್ಪಿ ಕೆ. ರಾಮರಾಜನ್‌ ಮತ್ತು ಇತರೆ ಅಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು – NSS ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಮಾಡಿ, ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ‌ ಅವಕಾಶ. ಇಲ್ಲಿ ಸೇವಾ ಮನೋಭಾವ ಮಾತ್ರವಲ್ಲ ಅದರ […]

ʼಕೊಡಗಿನಲ್ಲಿ ಡೇಟಿಂಗ್‌ಗೆ ಆಂಟಿ, ಹುಡ್ಗೀರು ಸಿಗ್ತಾರೆʼ ಅಂತ ಪೋಸ್ಟ್‌ ಹಾಕಿದವ ಅಂದರ್..!‌

ಮಡಿಕೇರಿ : ಕೊಡಗು ಜಿಲ್ಲೆಯ ಖ್ಯಾತಿಗೆ ಧಕ್ಕೆ ತರುವಂತೆ ಪೋಸ್ಟ್‌ ಹಾಕಿದ್ದ ವ್ಯಕ್ತಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನದ ಹಿಂದೆ ಇನ್ಸ್ಟಾಗ್ರಾಂನಲ್ಲಿ ಮಡಿಕೇರಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ವಿಡಿಯೋ ಬಳಸಿಕೊಂಡು ʼಮಡಿಕೇರಿ ಜಿಲ್ಲೆಯಲ್ಲಿ ಹುಡುಗಿ ಆಂಟಿ ಡೇಟಿಂಗ್‌ ಮಾಡೋದಕ್ಕೆ ಸರ್ವಿಸ್‌ ಬೇಕಾದ್ರೆ ಕಾಲ್‌ ಮಾಡಿʼ ಅಂತ ಪೋಸ್ಟ್‌ ಹಾಕಲಾಗಿತ್ತು. ಈ ವಿಚಾರವಾಗಿ ಅನೇಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಡಿಕೇರಿ ಡಿವೈಎಸ್ಪಿ ಪಿ.ಎ. ಸೂರಜ್‌, ಸಿಪಿಐ […]

ದಸರಾ ಪೂರ್ವಭಾವಿ ಸಭೆ – ದಶಮಂಟಪ ಸಾಗುವ ಮಾರ್ಗದ ಗುಂಡಿ ಮುಚ್ಚಲು ಶಾಸಕ ಮಂತರ್‌ ಗೌಡ ಸೂಚನೆ

ಮಡಿಕೇರಿ : ಮಡಿಕೇರಿ ಜನೋತ್ಸವ ದಸರಾ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಡಾ.ಮಂತರ್ ಗೌಡ ಮಾತನಾಡಿ, ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ […]