ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ – ನೊಂದು ಆತ್ಮಹ*ತ್ಯೆಗೆ ಶರಣಾದ ಯುವಕ..!

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಮರಗೋಡು ಜನತಾ ಕಾಲೋನಿ ನಿವಾಸಿ ಮನೋಜ್(26)‌ ಮೃತ ಯುವಕ. ಮನೋಜ್‌ ಉಡುಪಿಯಲ್ಲಿ ಹೋಟೆಲ್‌ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್‌ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾನೆ. ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ […]

ಮಾದರಿ ಆಚರಣೆ ಮೂಲಕ ಮೆಚ್ಚುಗೆ ಗಳಿಸಿದ ವಿನಾಯಕ ಸೇವಾ ಟ್ರಸ್ಟ್‌ ಗಣೇಶೋತ್ಸವ

ಮಡಿಕೇರಿ : ಕತ್ತಲೆಕಾಡು ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ ಜರುಗಿದ 19ನೇ ವರ್ಷದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಿದ ಟ್ರಸ್ಟ್‌, ಮೂರು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಆ.27ರಂದು ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಜೋರು ಮಳೆಯ ನಡುವೆಯೂ ಗ್ರಾಮಸ್ಥರು ಉತ್ಸಾಹದಿಂದ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ ಸಂಗೀತ ರಜಮಂಜರಿ ಹಮ್ಮಿಕೊಳ್ಳಲಾಗಿತ್ತು. ಸೋಮವಾರಪೇಟೆಯ ವಿಶ್ವರೂಪ […]