ನಿವೃತ್ತ ಶಿಕ್ಷಕಿಗೆ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗೌರವದ ಸನ್ಮಾನ

ಗೋಣಿಕೊಪ್ಪ : ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 26 ವರ್ಷ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಶಿಕ್ಷಕಿ ಪೂದ್ರಿಮಾಡ ತಾರಾ ಪ್ರಕಾಶ್‌ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು. ಗೊಟ್ಟಡ ಕಳತ್ಮಾಡುವಿನ ಶ್ರೀ ಅಯ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಸೇವಾ ಸಂಘದವ ವತಿಯಿಂದ 27ನೇ ವರ್ಷದ ಶ್ರೀ ಗೌರಿ ಗಣೇಶ ಉತ್ಸವ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾರಾ ಪ್ರಕಾಶ್‌ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಗ್ರಾಮಸ್ಥರು, ವಿದ್ಯಾರ್ಥಿಗಳು, ತಾರಾ ಪ್ರಕಾಶ್‌ ಅವರ ಶಿಷ್ಯ ವೃಂದ ಈ […]

26 ವರ್ಷದ ಪ್ರೇಯಸಿಯನ್ನು ಬೆಂಕಿ ಹಚ್ಚಿ ಕೊಂದ 52 ವರ್ಷದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು..!

ಬೆಂಗಳೂರು : ತನ್ನಿಂದ ದೂರವಾಗಲು ಮುಂದಾದ 26 ವರ್ಷದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಿರರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 52 ವರ್ಷದ ವಿಠ್ಠಲ ಎಂಬಾತನೇ ಪ್ರೇಯಸಿಯನ್ನು ಹತ್ಯೆಗೈದ ವ್ಯಕ್ತಿ. ಇಬ್ಬರು ಕೂಡಾ ಆನೇಕಲ್‌ ಮಳೆನಲ್ಲಸಂದ್ರ ನಿವಾಸಿಗಳಾಗಿದ್ದು, ವನಜಾಕ್ಷಿ ವಿಧವೆಯಾಗಿದ್ದು, ವಿಠ್ಠಲನ ಪತ್ನಿಯೂ ತೀರಿಕೊಂಡಿದ್ದಳು. ಇಬ್ಬರು ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ನಾಲ್ಕು ವರ್ಷದಿಂದ ಇಬ್ಬರು ಸಹಜೀವನ ನಡೆಸುತ್ತಿದ್ದರು ಅಂತ ಹೇಳಲಾಗಿದೆ. ಹೀಗಿರುವಾಗ ವನಜಾಕ್ಷಿ ಬೇರೊಬ್ಬನ ಜೊತೆ ಸ್ನೇಹ ಬೆಳೆಸಿ ಈತನಿಂದ ದೂರವಾಗಲು ಮುಂದಾಗಿದ್ದಾಳೆ. ಈ ವಿಷಯವಾಗಿ ಇಬ್ಬರ […]

ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ದೊಡ್ಡ ಸಾಧನೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ […]

ಕೆನರಾ ಬ್ಯಾಂಕ್ & ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ

ಸುಂಟಿಕೊಪ್ಪ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಸುಂಟಿಕೊಪ್ಪದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತೀವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಅನಿಕೇತ್, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ […]

ಶಿಕ್ಷಕರ ದಿನದ ಸುಸಂದರ್ಭದಲ್ಲಿ ನಿಮ್ಮ ನೆಚ್ಚಿನ ಶಿಕ್ಷಕರ ಸ್ಮರಣೆಯನ್ನು Coorg Buzz ಜೊತೆ ಹಂಚಿಕೊಂಡು ಸಂಭ್ರಮಿಸಿ…

ಮಡಿಕೇರಿ : ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರತಿಯೊಬ್ಬರ ಜೀವನದಲ್ಲೂ ಶಿಕ್ಷಕರು ಮಹತ್ತರವಾದ ಪಾತ್ರ ನಿರ್ವಹಿಸಿರುತ್ತಾರೆ. ಈ ಸಂದರ್ಭದಲ್ಲಿ ಅವರನ್ನು ಮತ್ತೊಮ್ಮೆ ನೆನಪು ಮಾಡಿಕೊಳ್ಳುವುದಕ್ಕೆ Coorg Buzz ಅವಕಾಶ ಕಲ್ಪಿಸುತ್ತಿದೆ. ನಿಮ್ಮ ನೆಚ್ಚಿನ ಶಿಕ್ಷಕರ ಬಗ್ಗೆ ವಿಡಿಯೋ ಮಾಡಿ ನಮಗೆ ಕಳುಹಿಸಿ. ನಿಮ್ಮ ನೆಚ್ಚಿನ ಶಿಕ್ಷಕರು ಯಾರು, ಯಾಕಾಗಿ ಅವರಂದ್ರೆ ನಿಮಗೆ ಅಚ್ಚುಮೆಚ್ಚು ಎಂಬ ಬಗ್ಗೆ ವಿಡಿಯೋ ಮಾಡುವಾಗ ಮೊಬೈಲ್‌ ಅನ್ನು ಸರಿಯಾದ ರೀತಿಯಲ್ಲಿ ಸೆಟ್‌ ಮಾಡಿಕೊಳ್ಳಿ. ನಿಮಿಷದ ಒಳಗೆ […]

ಭಾಗಮಂಡಲ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳ ಪುನರ್ಮಿಲನ – ಗುರುಗಳಿಗೆ ಸನ್ಮಾನಿಸಿ ಗೌರವಾರ್ಪಣೆ

ಭಾಗಮಂಡಲ(Bhagamandala) : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2007ನೇ ಸಾಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪುನರ್ಮಿಲನ ಕಾರ್ಯಕ್ರಮ ನಡೆಯಿತು. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು. ಶಾಲೆಯ ಅಭಿವೃದ್ಧಿಗೆ ತಾವು ಸಹಕರಿಸುತ್ತೇವೆ ಎಂಬ ಭರವಸೆ ನೀಡಿದರು. 2007ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಾಲೆಗೆ ಪ್ರೊಜೆಕ್ಟರ್ ಹಾಗೂ ತಟ್ಟೆಗಳನ್ನು ಕೊಡುಗೆಯಾಗಿ ನೀಡಲಾಯಿತು. ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್‌.ಡಿ.ಎಂ.ಸಿ. ಅಧ್ಯಕ್ಷರು ಸೇರಿದಂತೆ ಅನೇಕರು […]

ನಿಯಮ ಮೀರಿ ಡಿಜೆ ಬಳಕೆ – 05 ಸಮಿತಿ ವಿರುದ್ಧ ಪ್ರಕರಣ ದಾಖಲು – ಡಿಜೆ ಸಿಸ್ಟಂ ವಶಪಡಿಸಿಕೊಂಡ ಪೊಲೀಸರು..!

ಕುಶಾಲನಗರ(Kushalnagar) : ನಿಯಮ ಮೀರಿ ಧ್ವನಿವರ್ದಕ/ಡಿಜೆ(dj) ಬಳಸುವವರ ವಿರುದ್ಧ ಕ್ರಮಕ್ಕೆ ಜಿಲ್ಲಾ ಪೊಲೀಸ್‌(police) ಮುಂದಾಗಿದೆ. ಕುಶಾಲನಗರ ವ್ಯಾಪ್ತಿಯಲ್ಲಿ ನಿನ್ನೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧೆಡೆ ಬಳಸಲಾಗಿದ್ದ ಡಿಜೆ ಸಿಸ್ಟಂಗಳನ್ನು ವಶಕ್ಕೆ ಪಡೆದಿದ್ದಾರೆ. ಮಾದಾಪಟ್ಟಣ ವ್ಯಾಪ್ತಿಯಲ್ಲಿ 04, ಜನತಾ ಕಾಲನಿ ಗಣೇಶೋತ್ಸವ ಮೆರವಣಿಗೆಯಲ್ಲಿ ಬಳಸಲಾಗಿದ್ದ ಒಂದು ಡಿಜೆ ಸಿಸ್ಟಂ, ಧ್ವನಿವರ್ದಕ, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸಮಿತಿಯವರ ಮೇಲೆ ಕೇಸ್‌ ಕೂಡಾ ದಾಖಲಾಗಿದೆ. ನಿಯಮ ಮೀರಿ ಅಬ್ಬರದ ಸಂಗೀತ ಹಾಕಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್‌ ಅಧಿಕಾರಿಗಳು ಗಣೇಶೋತ್ಸವಕ್ಕೆ ಮುಂಚಿತವಾಗಿಯೇ […]