ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಗಣೇಶೋತ್ಸವ – ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ

ವಿರಾಜಪೇಟೆ : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಈ ಬಾರಿ 43ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆಯಿತು. ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಏಳು ದಿವಸಗಳ ಕಾಲ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಆರಾಧಿಸಲಾಯಿತು. ವಿಸರ್ಜನೋತ್ಸವದಂದು ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನ […]

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ ಹಿರಿಯ ನಟಿಯರು..!

ಬೆಂಗಳೂರು : ಸಾಹಸ ಸಿಂಹ ಡಾ. ವಿಷ್ಣುವರ್ಧನ್‌(Dr VIshnuvardhan) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಜೊತೆಗೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಸ್ಥಳಕ್ಕೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

ಸ್ವಾತಂತ್ರ್ಯೋತ್ಸವ ಪ್ರಯುಕ್ತ ತಾಲೂಕು ಮಟ್ಟದ ನೃತ್ಯ ಸ್ಪರ್ಧೆ – ಕೂರ್ಗ್‌ ಇನ್ಸ್‌ಟಿಟ್ಯೂಟ್‌ ಆಫ್‌ ಪಿ.ಯು. ಕಾಲೇಜು ತೃತೀಯ

ಪೊನ್ನಂಪೇಟೆ : ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ತಾಲೂಕು ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜು ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದಾರೆ. ಕಾಲೇಜಿನ ತಂಡಕ್ಕೆ ತೃತೀಯ ಬಹುಮಾನ ಲಭಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ದೈವಿಕ್ ದೇವಯ್ಯ, ಮೋಕ್ಷಾ ಮುತ್ತಮ್ಮ, ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಪ್ರಿಯದರ್ಶಿನಿ, ಮಂಜುಶ್ರೀ ವಿನೋದ್, ಜೋಶ್ನಾ, ಸಮನ್ವಿತ ಭಾಗವಹಿಸಿದ್ದರು.

ವಿಶೇಷ ಚೇತನ ಫಲಾನುಭವಿಗಳಿಗೆ ಶಾಸಕರ ನಿಧಿಯಿಂದ ವಾಹನ ವಿತರಿಸಿದ ಎ.ಎಸ್.‌ ಪೊನ್ನಣ್ಣ

ವೀರಾಜಪೇಟೆ : ಶಾಸಕರ ನಿಧಿಯಿಂದ ವಿಶೇಷ ಚೇತನರಿಗೆ ನೀಡಲಾಗುವ ನಾಲ್ಕು ಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಇಂದು ವಿತರಿಸಲಾಯಿತು. ವಿರಾಜಪೇಟೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿತರಿಸಿದರು. ಸಮಾಜದಲ್ಲಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ಈ ಸೌಲಭ್ಯ ಒದಗಿಸಲಾಗುತ್ತಿದೆ. ವಿಶೇಷ ಚೇತನರು ತಮ್ಮಲ್ಲಿನ ಸಮಸ್ಯೆಯನ್ನು ಮರೆತು ಸಮಾಜದಲ್ಲಿ ತಮ್ಮ ಕೈಲಾದ ಸಾಧನೆ ಮಾಡಲು ಪ್ರಯತ್ನಿಸಬೇಕೆಂದು ಹೇಳಿದರು. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು […]

ದಸರಾ ಉದ್ಘಾಟಕರು ಕುಂಕುಮ ಹಚ್ಚಲಿ, ಹಿಂದುವಾಗಲಿ ಎನ್ನುವುದು ತರವಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು : ಸಾಹಿತಿ ಬಾನು ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು. ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ […]