ಸೆ.07 ರಂದು ಚಂದ್ರಗ್ರಹಣ – ಈ ದೇವಾಲಯದಲ್ಲಿ ದೇವರ ದರ್ಶನ ಇರಲ್ಲ..!

ಮಡಿಕೇರಿ : ಸೆಪ್ಟೆಂಬರ್ ೦೭ ರಂದು ಸಂಭವಿಸುವ ಭಾದ್ರಪದ ಶುಕ್ಲ ಪೌರ್ಣಮಿ ರಾಹುಗ್ರಸ್ತ ಚಂದ್ರಗ್ರಹಣ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ಸಂಜೆ ೫ ಗಂಟೆಯಿಂದ ಭಕ್ತರಿಗೆ ದೇವರ ದರ್ಶನ ಮತ್ತು ಹುಣ್ಣಿಮೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಇರುವುದಿಲ್ಲ. ಆದ್ದರಿಂದ ಭಕ್ತಾಧಿಕಾರಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಕೋರಿದ್ದಾರೆ.

ಸೆ.12 ರವರೆಗೆ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಪ್ತಾಹ ಕಾರ್ಯಕ್ರಮ

ಮಡಿಕೇರಿ : ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ೨೦೨೫-೨೬ನೇ ಸಾಲಿನ ಅಂತರರಾಷ್ಟೀಯ ಸಾಕ್ಷರತಾ ದಿನಾಚರಣೆ ಮತ್ತು ಕೇಂದ್ರ ಪುರಷ್ಕೃತ ಯೋಜನೆಯ “ಉಲ್ಲಾಸ್ ನವ ಭಾರತ ಸಾಕ್ಷರತಾ ಸಪ್ತಾಹ”ವನ್ನು ಸೆಪ್ಟಂಬರ್ ೦೧ ರಿಂದ ೧೨ ರವರೆಗೆ ಆಚರಿಸುತ್ತಿದೆ. ಕರ್ನಾಟಕ ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ನಾಡನ್ನಾಗಿ ಮಾಡುವ ನಿಟ್ಟಿನಲ್ಲಿ ಲೋಕ ಶಿಕ್ಷಣ ನಿರ್ದೇಶನಾಲಯವು ಅನಕ್ಷರಸ್ಥರಲ್ಲಿ ಅಕ್ಷರ ಜ್ಞಾನ ಮೂಡಿಸಿ ನವ ಸಾಕ್ಷರರನ್ನಾಗಿ ಮಾಡುವ ಉದ್ದೇಶ ಕರ್ನಾಟಕ ಸರ್ಕಾರದ್ದಾಗಿದೆ. ಮೂಲ ಶಿಕ್ಷಣದಿಂದ ವಂಚಿತರಾಗಿರುವವರನ್ನು ಗುರುತಿಸಿ ಅಂತವರಿಗೆ ಬುನಾದಿ ಶಿಕ್ಷಣ, ಸುಲಭ […]

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸದಂತೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರತಾಪ್‌ ಸಿಂಹ..!

ಮೈಸೂರು : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ವಿಚಾರವಾಗಿ ನಡೆಯುತ್ತಿರುವ ಪರ-ವಿರೋಧ ವಿಚಾರ ಈಗ ನ್ಯಾಯಾಲಯ ಮೆಟ್ಟಿಲೇರಿದೆ. ಬುಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುತ್ತಾರೆಂದು ಸರ್ಕಾರ ಹೇಳಿದಾಗಿನಿಂದ ಮಾಜಿ ಸಂಸದ ಪ್ರತಾಪ್‌ ಸಿಂಹ ತಮ್ಮ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಇದೀಗ ಅವರಿಂದ ದಸರಾ ಉದ್ಘಾಟನೆಗೆ ತಡೆ ನೀಡಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ದಿನದ ಹಿಂದೆ ಸರ್ಕಾರ ಹಾಸನದ ಬಾನು ಮುಷ್ತಾಕ್‌ ಮನೆಗೆ ತೆರಳಿ ಅಧಿಕೃತ ಆಹ್ವಾನ ನೀಡಿತ್ತು. […]

ಕೊಡಗು ಪತ್ರಕರ್ತರ ಸಂಘ(ರಿ) ಕ್ಷೇಮಾಭಿವೃದ್ಧಿ ಸಮಿತಿಯಿಂದ ಬೃಹತ್ ಆರೋಗ್ಯ ತಪಾಸಣಾ ಉಚಿತ ಶಿಬಿರ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ಇದರ ಕ್ಷೇಮಾಭಿವೃದ್ಧಿ ಸಮಿತಿಯಿಂದ 2025 ರ ಸೆಪ್ಟೆಂಬರ್‌ 12ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗ, ಪತ್ರಿಕಾ ಕ್ಷೇತ್ರದ ಸಿಬ್ಬಂದಿ, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ 15 ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. […]

ದಕ್ಷಿಣ ವಲಯ ಮಟ್ಟದ ಬ್ಯಾಡ್ಮಿಂಟನ್ – ಕೊಡಗಿನ ದಿಯಾ ಭೀಮಯ್ಯಗೆ ಪ್ರಶಸ್ತಿ

ತೆಲಂಗಾಣ : ಹೈದರಾಬಾದ್‌ನ ಹಾರ್ಟ್ಫುಲ್ನೆಸ್ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆದ ಯೋನೆಕ್ಸ್ ಸನ್ ರೈಸ್ 79ನೇ ದಕ್ಷಿಣ ವಲಯ ಅಂತಾರಾಜ್ಯ ಬ್ಯಾಡ್ಮಿಂಟನ್ 2025 ಸ್ಪರ್ಧೆಯಲ್ಲಿ ಕೊಡಗಿನ ದಿಯಾ ಭೀಮಯ್ಯ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 19 ವರ್ಷದ ಬಾಲಕಿಯರ ಸಿಂಗಲ್ಸ್‌ನಲ್ಲಿ ದ್ವಿತೀಯ ಹಾಗೂ ತಂಡ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ. ಸೆಪ್ಟೆಂಬರ್ 2 ರಿಂದ 5ನೇ ತಾರೀಖಿನವರೆಗೆ ಸ್ಪರ್ಧೆ ನಡೆಯಿತು. ದೇಶದ ವಿವಿಧ ಕಡೆಗಳಿಂದ ಸ್ಪರ್ಧಿಗಳು ಹಾಗೂ ತಂಡಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.