ಹೀರೋ ಏಷ್ಯಾ ಕಪ್ ಹಾಕಿ ಟೂರ್ನಿ : ಚಾಂಪಿಯನ್ ಆಗಿ ಹೊರಹೊಮ್ಮಿದ ಟೀಂ ಇಂಡಿಯಾ – ವಿಶ್ವಕಪ್‌ಗೆ ಪ್ರವೇಶ ಪಡೆದ ಹರ್ಮನ್‌ಪ್ರೀತ್ ಪಡೆ…

ಒಡಿಸ್ಸಾ : ಅಮೋಘ ಪ್ರದರ್ಶನ ನೀಡಿದ ಭಾರತ ಹಾಕಿ ತಂಡ ಏಷ್ಯಾ ಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಇಂದು ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಗಿದ್ದ ಕೊರಿಯಾ ವಿರುದ್ಧ 4-1 ಗೋಲುಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ನಾಲ್ಕನೇ ಬಾರಿಗೆ ಭಾರತ ಏಷ್ಯಾ ಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಂದ್ಯದ ಆರಂಭದಿಂದಲೇ ಬಿರುಸಿನ ಆಟಕ್ಕೆ ಮುಂದಾದ ಟೀಂ ಇಂಡಿಯಾ ಆಟಗಾರರು ಕೊರಿಯಾ ಆಟಗಾರರಿಗೆ ಪಂದ್ಯದಲ್ಲಿ ಹಿಡಿತ ಸಾಧಿಸುವುದಕ್ಕೆ ಅವಕಾಶವನ್ನೇ ಕೊಡಲಿಲ್ಲ. ಪೆನಾಲ್ಟಿ ಕಾರ್ನರ್ ಅವಕಾಶದ […]
ವೀರಾಜಪೇಟೆ ಗಣೇಶೋತ್ಸವ – ನಿಯಮ ಮೀರಿ ಅಬ್ಬರದ ಸಂಗೀತ/ಡಿಜೆ ಬಳಕೆ – 16 ಪ್ರಕರಣ ದಾಖಲು

ವೀರಾಜಪೇಟೆ(Virajpet) : ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಸಾಮೂಹಿಕವಾಗಿ ಗಣೇಶೋತ್ಸವ ಆಚರಿಸಲಪಡುವ ವೀರಾಜಪೇಟೆಯಲ್ಲಿ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯ ಶನಿವಾರ(saturday) ರಾತ್ರಿ ವೈಭವದಿಂದ ನೆರವೇರಿದೆ. ಈ ನಡುವೆ ಕಾನೂನು ಉಲ್ಲಂಘನೆ ಸಂಬಂಧ ಪ್ರಕರಣ ಕೂಡಾ ದಾಖಲಾಗಿದೆ. ಗಣೇಶೋತ್ಸವದಲ್ಲಿ ನಿಯಮ ಮೀರಿ ಧ್ವನಿವರ್ದಕ/ಡಿಜೆ(dj) ಬಳಸದಂತೆ ಜಿಲ್ಲಾ ಪೊಲೀಸ್ ಇಲಾಖೆ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ ವೀರಾಜಪೇಟೆ ಗಣೇಶೋತ್ಸವ ಮೆರವಣಿಗೆಯಲ್ಲಿ ನಿಯಮ ಮೀರಿ ಅಬ್ಬರದ ಸಂಗೀತ ಬಳಸಲಾಗಿದ್ದು, ಈ ಸಂಬಂಧ 16 ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಗಣೇಶೋತ್ಸವ […]
ಸಮಾಜದಲ್ಲಿನ ಹಿರಿಯರನ್ನು ಪ್ರತಿಯೊಬ್ಬರು ಗೌರವಿಸಬೇಕು : ರೆ.ಫಾ. ಜೇಮ್ಸ್ ಡೊಮಿನಿಕ್

ವಿರಾಜಪೇಟೆ : ಹಿರಿಯರನ್ನು ಪ್ರತಿಯೊಬ್ಬರು ಕೂಡ ಗೌರವಿಸಬೇಕು ಎಂದು ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್‌ನ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಜೇಮ್ಸ್ ಡೊಮಿನಿಕ್ ಅಭಿಪ್ರಾಯಪಟ್ಟರು. ಸಂತ ಅನ್ನಮ್ಮ ದ್ವಿ-ಶತಮಾನೋತ್ಸವ ಸಭಾಂಗಣದಲ್ಲಿ ಮದರ್ ಥೆರೇಸಾ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿರಿಯರನ್ನು ಗೌರವಿಸುವುದು ಗಮನಾರ್ಹ ವಿಚಾರವಾಗಿದೆ. ಈ ಧರ್ಮಸಭೆಯನ್ನು ಹಿರಿಯರು ಕಟ್ಟಿ ಬೆಳೆಸಿರುತ್ತಾರೆ. ಧರ್ಮ ಕೇಂದ್ರದಲ್ಲಿ […]
ವಾಲಿಬಾಲ್ ಪಂದ್ಯಾವಳಿ – ಬೇಟೋಳಿ ಸ.ಹಿ.ಪ್ರಾ. ಶಾಲೆ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ವೀರಾಜಪೇಟೆ : ಗುಂಡಿಕೆರೆ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದೆ. ಮಾಯಮುಡಿಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀಮಂಗಳ ಸಮೀಪದ ಕಾಕೂರಿನ ಜೆ. ಸಿ. ಶಾಲಾ ತಂಡವನ್ನು 21-15 ಮತ್ತು 21-12 ನೇರ ಸೆಟ್ಟುಗಳಿಂದ ಸೋಲಿಸಿ ವಿನ್ನರ್ಸ್ ಪ್ರಶಸ್ತಿಯನ್ನು ತನ್ನದಾಗಿಸುವ ಮೂಲಕ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ತಂಡ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದೆ. […]