ಸೆಪ್ಟೆಂಬರ್ ೧೦ ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ : ೬೬/೧೧ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಾಸೀಟ್ ಫೀಡರ್‌ನಲ್ಲಿ ಸೆಪ್ಟೆಂಬರ್ ೧೦ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿ ನಗರ, ನ್ಯೂ ಎಕ್ಸಟೆಂಕ್ಷನ್, ಎಲ್.ಐ.ಸಿ ರಸ್ತೆ, ಸ್ಟುವರ್ಟ್ ಹಿಲ್, ಗೌಳಿ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್‌ ಇಂಜಿನಿಯರ್ […]

ವಿದ್ಯುತ್‌ ಗ್ರಾಹಕರ ಕುಂದುಕೊರತೆ ನಿವಾರಿಸಲು ಸೆ.೧೧ ಮತ್ತು ೧೨ ರಂದು ವಿವಿಧೆಡೆ ಜನ ಸಂಪರ್ಕ ಸಭೆ

ಮಡಿಕೇರಿ : ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಸೆಪ್ಟೆಂಬರ್ ೧೧ ರಂದು ಬೆಳಗ್ಗೆ ೧೧.೩೦ ಗಂಟೆಯಿಂದ ೧೨.೩೦ ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆ ಸೆಪ್ಟೆಂಬರ್ ೧೧ ರಂದು ಮಧ್ಯಾಹ್ನ ೦೨.೩೦ ಗಂಟೆಯಿಂದ ೦೩.೩೦ ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೋಮವಾರಪೇಟೆ […]

ಮಡಿಕೇರಿ ದಸರಾ 2025 – ಸೆ.30ಕ್ಕೆ ಮಕ್ಕಳ ದಸರಾ – ಮಕ್ಕಳ ಸಂತೆ, ಅಂಗಡಿ, ಮಂಟಪ, ಛದ್ಮವೇಶ, ಕ್ಲೇ ಮಾಡೆಲಿಂಗ್ ಸೇರಿ ಹಲವು ಆಕರ್ಷಣೆ..!

ಮಡಿಕೇರಿ : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಸೆಪ್ಬೆಂಬರ್ 30 ರಂದು ಮಂಗಳವಾರ ನಗರದ ಗಾಂಧಿ ಮೈದಾನದಲ್ಲಿ 12 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಮತ್ತು ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಮಕ್ಕಳ ದಸರಾ ಸ್ಪಧೆ೯ಗಳು ಸೆ 30 ರಂದು ಮಂಗಳವಾರ ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ. ಮಕ್ಕಳ […]

ಸೆ.09ರಂದು ಕೊಡಗಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ..!

ಮಡಿಕೇರಿ  : ಮೂರ್ನಾಡು ೩೩/೧೧ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್3 ಮೂರ್ನಾಡು, ಎಫ್2 ನಾಪೋಕ್ಲು ಹಾಗೂ ಹೊದ್ದೂರು ಫೀಡರ್‌ನಲ್ಲಿ ಸೆಪ್ಟೆಂಬರ್ ೦೯ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ನಡೆಸಬೇಕಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು ಟೌನ್ ಮುತ್ತಾರ್‌ಮುಡಿ, ಕಿಗ್ಗಾಲು, ಕುಂಬಳದಾಳು, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೇರೂರು, ನಾಪೋಕ್ಲು ಟೌನ್ ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲ್ಲೂಕು ಹಾಗೂ […]

ಪಂಚ ಗ್ಯಾರಂಟಿ ಯೋಜನೆಗೆ ಈವರೆಗೆ ಖರ್ಚಾಗಿದ್ದು 97,813 ಕೋಟಿ ರೂ..! – ಯಾವ್ಯಾವ ಯೋಜನೆಗೆ ಎಷ್ಟೆಷ್ಟು ಖರ್ಚಾಯ್ತು? ಇಲ್ಲಿದೆ ಮಾಹಿತಿ

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ […]

ʼವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳುʼ – ಒಂದು ದಿನದ ಮಾಹಿತಿ ಕಾರ್ಯಾಗಾರ – ಹೆಸರು ನೋಂದಣಿಗೆ ಅವಕಾಶ

ಕುಶಾಲನಗರ : ದೊಡ್ಡ ಅಳುವಾರದಲ್ಲಿರುವ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಸೆ. 11ರಂದು ʼವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳುʼ ವಿಷಯದ ಬಗ್ಗೆ ಒಂದು ದಿನದ ತರಬೇತಿ ಆಯೋಜಿಸಲಾಗಿದೆ. ತರಬೇತಿಯಲ್ಲಿ ವಿಷಪೂರಿತ ಹಾವುಗಳ ಬಗ್ಗೆ ಮಾಹಿತಿ, ಹಾವುಗಳನ್ನು ಹಿಡಿಯುವ ಸಲಕರಣೆ, ಹಾವು ಬರದಂತೆ ತಡೆಯುವುದು, ಅಹಾರ, ಪ್ರಥಮ ಚಿಕಿತ್ಸೆ, ಅಪನಂಬಿಕೆಗಳು, ರೈತಸ್ನೇಹಿ ಹಾವುಗಳು, ಇತ್ಯಾದಿ ವಿಷಯದ ಬಗ್ಗೆ ವಿಷಯ ತಜ್ಞರಿಂದ ಮಾಹಿತಿ ನೀಡಲಾಗುವುದು. ಆಸಕ್ತ ರೈತರು ಹಾಗೂ ಸಾರ್ವಜನಿಕರು ಮೊಬೈಲ್ ಸಂಖ್ಯೆ : 8880557766, […]

ಮೈಸೂರು ದಸರಾ ಉದ್ಘಾಟನೆ ವಿವಾದ : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ವಿರೋಧಿಸುತ್ತಿಲ್ಲ – ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಬಾನು ಮುಷ್ತಾಕ್‌ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ದಸರಾ ಉದ್ಘಾಟನೆಗೆ ವಿರೋಧ ಪಡಿಸುತ್ತಿಲ್ಲ. ಹಿಂದುಗಳ ಅರಿಶಿಣ ಕುಂಕುಮದ ಕುರಿತಾಗಿನ ಅವರ ನಿಲುವಿನ ಬಗ್ಗೆ ನಮ್ಮ ಆಕ್ಷೇಪ ಇರುವುದು ಅಂತ ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್‌ ಬುಕರ್‌ ಪ್ರಶಸ್ತಿ ಗೆದ್ದಾಗ ನಾವೆಲ್ಲ ಅವರನ್ನು ಅಭಿನಂದಿಸಿದ್ದೇವೆ. ಆದರೆ ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿದ ಸಂದರ್ಭದಲ್ಲಿ ನಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದು, ವಿರೋಧವನ್ನೂ ವ್ಯಕ್ತಪಡಿಸಿದ್ದೇವೆ. ಅವರಿಗೆ ಹಿಂದುಗಳ ಆಚರಣೆ, […]