ಕಾಲೇಜು ಆವರಣದಲ್ಲಿ ಮಚ್ಚು ಹಿಡಿದು ರೀಲ್ಸ್‌ – ಕೇಸ್‌ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚಿಸಿದ ವಿದ್ಯಾರ್ಥಿ..!

ಕುಶಾಲನಗರದ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿದ್ಯಾರ್ಥಿ ಈಗ ಕ್ಷಮೆ ಯಾಚಿಸಿದ್ದಾನರೆ. ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಕಾಲೇಜಿನೊಳಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ, ಇದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ವ್ಯವಸ್ಥೆ ವಿರುದ್ಧ ಕೂಡ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಮಾತ್ರವಲ್ಲ ಈ ಬಗ್ಗೆ ಕುಶಾಲನಗರ ಪೊಲೀಸ್‌ […]

ಚನ್ನಪಟ್ಟಣದಲ್ಲಿ ಕಾರು ಅಪಘಾತ : ಕೊಡಗಿನ ದಂಪತಿ ದುರ್ಮರಣ

ರಾಮನಗರ : ಚನ್ನಪಟ್ಟಣದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಕೊಡಗಿನ ದಂಪತಿ ದುರ್ಮರಣಕ್ಕೀಡಾಗಿದ್ದಾರೆ. ಪೊನ್ನಂಪೇಟೆ ತಾಲೂಕಿನ ಪೂಕೋಳ ಗ್ರಾಮದ ಕಾಳಿಮಾಡ ಸೋಮಯ್ಯ ಹಾಗೂ ಸರಸು ಎಂಬವರೇ ಮೃತ ದಂಪತಿ. ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಜೊತೆಯಲ್ಲಿದ್ದ ಪುತ್ರ ಸಜನ್ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.