ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ – ಹೆಚ್ಚಿನ ವಿವರ ಇಲ್ಲಿದೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕ.ರಾ.ಮು.ವಿ ಮಡಿಕೇರಿಯಲ್ಲಿ 2025-26 ಸಾಲಿನ ಪ್ರವೇಶಾತಿಯ ಕೊನೆಯ ದಿನಾಂಕವನ್ನು ಅಕ್ಟೋಬರ್, 10 ರವರೆಗೆ ವಿಸ್ತರಿಸಲಾಗಿದೆ. ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ […]
ಚಿಕ್ಕತ್ತೂರುವಿನಲ್ಲಿ ಪೋಷಣ ಅಭಿಯಾನ ಮತ್ತು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಕುಶಾಲನಗರ : ಚಿಕ್ಕತ್ತೂರು ಗ್ರಾಮದಲ್ಲಿ ಪೋಷಣ ಅಭಿಯಾನ ಮತ್ತು ಆತ್ಮಹತ್ಯೆ ತಡೆ ದಿನಾಚರಣೆ ನಡೆಯಿತು. ಕೂಡುಮಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ದೇಶದಲ್ಲಿ ಅಪೌಷ್ಟಿಕತೆ ತಡೆಯುವುದು ಮತ್ತು ಕಡಿಮೆ ತೂಕದ ಶಿಶುಗಳ ಜನನ ಮಟ್ಟವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಮಾತನಾಡಿ, ಅಪೌಷ್ಟಿಕತೆಯಿಂದ ಪೌಷ್ಟಿಕತೆಯಡೆಗೆ ಸಮುದಾಯವನ್ನು ಕೊಂಡೊಯ್ಯುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶ. ವಿಶ್ವದಾದ್ಯಂತ ಏಳರಿಂದ ಎಂಟು ಲಕ್ಷ ಜನರು ಪ್ರತಿ ವರ್ಷ […]
ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ

ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಾಲ್ಕು ದಿನದ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿಯು ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ರವರು ಮಾತನಾಡಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ ,ನೀತಿ […]