ಯೂಟ್ಯೂಬ್ ಚಾನಲ್‌ಗಳಿಗೆ ಸರ್ಕಾರದಿಂದ ಅಂಕುಶ..? – ಸಿಎಂ ಸಿದ್ದರಾಮಯ್ಯ ಕೊಟ್ರು ಮಹತ್ವದ ಸುಳಿವು..!

ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ […]
ಮೈತಾಡಿ ಗ್ರಾಮದಲ್ಲಿ ಗಬ್ಬದ ಹಸು ಹತ್ಯೆ – ಮೂವರು ಹಂತಕರ ಬಂಧನ..!

ವಿರಾಜಪೇಟೆ : ಮೈತಾಡಿ ಗ್ರಾಮದಲ್ಲಿ ಇತ್ತೀಚೆಗೆ ಗಬ್ಬದ ಹಸು ಕೊಂದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡಂಗೇರಿಯ ಮೊಹಮ್ಮದ್ ಆಶಿಕ್(22), ಶಾಹಿದ್(25), ಹ್ಯಾರೀಸ್ (34) ಬಂಧಿತರು. ಮೈತಾಡಿ ಗ್ರಾಮದ ಬೊಳ್ಳಪಂಡ ಎಂ.ಭೀಮಯ್ಯ ಎಂಬವರ ಹಸುವನ್ನು ಕದ್ದೊಯ್ದು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 303(1) 22 & 4, 5, 12 The Karnataka Prevention of Slaughter & Preservation of cattle Act-2020 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ […]
ಸಿದ್ದಾಪುರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ – ಇಬ್ಬರನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ : ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತಪಾನ್ ಸರ್ದಾರ್(38), ಅರ್ಚನಾ ಸರ್ದಾರ್(30) ಬಂಧಿತ ವ್ಯಕ್ತಿಗಳು. ಪಶ್ಚಿಮ ಬಂಗಾಳ ಮೂಲದವರಾದ ಇವರು ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಗಾಂಜಾ ಕೊಂಡೊಯ್ದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 1.166 ಕೆಜಿ ಗಾಂಜಾದೊಂದಿಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಾಣಿಗಳ ಭಾವನೆ ಅರ್ಥ ಮಾಡಿಕೊಂಡು ಅವುಗಳನ್ನು ಪ್ರೀತಿಯಿಂದ ಕಾಣಬೇಕು : ಡಾ. ರಾಕೇಶ್

ವೀರಾಜಪೇಟೆ : ಪ್ರಾಣಿಗಳನ್ನು ಮನುಷ್ಯರು ಪ್ರೀತಿಯಿಂದ ಕಾಣಬೇಕು ಎಂದು ವಿರಾಜಪೇಟೆಯ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಕೇಶ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರಾಣಿಗಳ ದಿನಾಚರಣೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತಿದ್ದರು. ಪ್ರಾಣಿಗಳನ್ನು ಹಿಂಸಿಸದೆ ಅವುಗಳನ್ನು ನಾವು ಪ್ರೀತಿಯಿಂದ ಕಾಣಬೇಕು. ಮನುಷ್ಯರು ಅವುಗಳನ್ನು ಹಿಂಸಿಸಿದರೆ ಅವುಗಳು ಕೂಡ ನಮಗೆ ಹಾನಿಯನ್ನು ಮಾಡಬಲ್ಲವು ಎಂದರು. ಮಕ್ಕಳು ತಮ್ಮ ವಿದ್ಯಾರ್ಥಿ ಹಂತದಿಂದಲೇ ಪ್ರಾಣಿಗಳ ಬಗ್ಗೆ ಅರಿವನ್ನು ಹೊಂದಿರಬೇಕು. ನಾವು […]
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ‘ಕೊಡವ ಮುಸ್ಲಿಂ’ ಎಂದು ಬರೆಸಲು KMA ಮನವಿ

ಪೊನ್ನಂಪೇಟೆ : ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಇದೇ ತಿಂಗಳ 22 ರಿಂದ ಆರಂಭಗೊಳ್ಳುವ ಈ ಸಮೀಕ್ಷೆಯಲ್ಲಿ ಕೊಡಗಿನ ಮೂಲ ನಿವಾಸಿಗರಾಗಿರುವ ಕೊಡವ ಮುಸ್ಲಿಮರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಮನವಿ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ, ಮೊಬೈಲ್ ಫೋನ್ ಬಳಸಿಕೊಂಡು ಡಿಜಿಟಲ್ ತಂತ್ರಜ್ಞಾನದ ಮೂಲಕ ಅಕ್ಟೋಬರ್ 7ರವರೆಗೆ […]