ಮಡಿಕೇರಿ ಜನೋತ್ಸವ ದಸರಾ 2025 : ಸೆ. 24 ರಂದು ಕಾಫಿ ದಸರಾ – ನೀವೂ ಭಾಗವಹಿಸಬಹುದು…

ಮಡಿಕೇರಿ : ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ಸೆ 24 ರಂದು ಬುಧವಾರ ಆಯೋಜಿತ ಎರಡನೇ ವಷ೯ದ ಕಾಫಿ ದಸರಾ ಸಂದಭ೯ ಕಾಫಿಯಿಂದ ತಯಾರಿಸಲ್ಪಡುವ ವೈವಿಧ್ಯಮಯ ಖಾದ್ಯಗಳ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮತ್ತು ಕಾಫಿ ದಸರಾ ಸಮಿತಿ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಕಾಫಿಯ ಮಹತ್ವ ತಿಳಿಸಲು ಮಾಹಿತಿಯುಕ್ತ ಸ್ಪಧೆ೯ಯನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾಫಿ […]
ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿ – ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜು ಬಾಲಕಿಯರ ತಂಡ ರನ್ನರಪ್

ಗೋಣಿಕೊಪ್ಪ : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜಿನ ಬಾಲಕಿಯರ ತಂಡ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಅಮ್ಮತ್ತಿ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪಂದ್ಯಾವಳಿಯಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿತ್ತು. ಗೋಣಿಕೊಪ್ಪ ಕಾಪ್ಸ್‌ನಲ್ಲಿ ನಡೆದ ಜಿಲ್ಲಾಮಟ್ಟದ ಪಂದ್ಯಾವಳಿಯಲ್ಲಿ ರನ್ನರಪ್ ಆಗಿ ಹೊರಹೊಮ್ಮಿದೆ. ಶಾಲೆಯ ವಿದ್ಯಾರ್ಥಿನಿಯರಾದ ನಷ್ಮಾ ನೀಲಮ್ಮ, ನಿವೇದಾ ದೇಚಮ್ಮ, ಸಿಯಾ ಗಂಗಮ್ಮ, ಆಕೃತಿ ಬಿ.ಎಂ, ಪ್ರಜ್ಞಾ ಪೊನ್ನಮ್ಮ ಎಂ.ಬಿ, ಪೊನ್ನಮ್ಮ ಎ.ಎಸ್, ಸೃಜಲ್ ಬೋಜಮ್ಮ, […]
ಹಾವುಗಳನ್ನು ಹಿಡಿದು ಫೋಟೋ ಶೂಟ್ ಮಾಡಿದರೆ ಕೇಸ್ ಬೀಳುತ್ತೆ ಎಚ್ಚರ..!

ಬೆಂಗಳೂರು : ಇತ್ತೀಚಿನ ದಿನದಲ್ಲಿ ಉರಗ ರಕ್ಷಣೆ ಹೆಸರಿನಲ್ಲಿ ಹಾವುಗಳಿಗೆ ಹಿಂಸೆ ನೀಡುತ್ತಿರುವುದು ಹಾಗೂ ಅವುಗಳನ್ನು ಬಳಸಿಕೊಂಡು ಫೋಟೋಶೂಟ್ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೊನೆಗೂ ಎಚ್ಚೆತ್ತಿದೆ. ಹಾವು ಹಾಗೂ ಅವುಗಳ ಮೊಟ್ಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ವಿಷ ತೆಗೆಯುವುದು, ಅನುಮತಿ ಇಲ್ಲದೆ ಅರಣ್ಯ ಪ್ರವೇಶಿಸಿದ ಸಂಶೋಧನೆ ಮಾಡುವವರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಮಲೆನಾಡು ಭಾಗದಲ್ಲಿ ಅನಧಿಕೃತವಾಗಿ ಕಾಳಿಂಗ […]
ನಾಳೆ(ಸೆ.18) ಕೊಡಗು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : ೬೬/೧೧ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್೬ ಭಾಗಮಂಡಲ ಫೀಡರ್‌ನಲ್ಲಿ ಸೆಪ್ಟೆಂಬರ್ ೧೮ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ತಲಕಾವೇರಿ ಜಾತ್ರೆ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಂಜಿನಿಯರ್ ಕೋರಿದ್ದಾರೆ.