ಸುಂಟಿಕೊಪ್ಪ ಚಿನ್ನದ ಅಂಗಡಿಯಲ್ಲಿ ಚಿನ್ನದ ಸರ ಕಳವು – ಮೂವರು ಮಹಿಳೆಯರ ಬಂಧನ

ಮಡಿಕೇರಿ : ಸುಂಟಿಕೊಪ್ಪದ ಫ್ಯಾಷನ್ ಜ್ಯುವೆಲರಿಯಲ್ಲಿ ಸೆ.14 ರಂದು ನಡೆದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಅಲ್ಪನಾ(37), ಬಬಿತಾ(47), ಪೂಜಾ(29) ಬಂಧಿತರು. ಬಂಧಿತರಿಂದ 22.180 ಗ್ರಾಂ ತೂಕದ 2 ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ. ಅಂಗಡಿಯಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಬಂದಿದ್ದ ಮೂವರು ಮಹಿಳೆಯರು, ಅಂಗಡಿಯವರ ಗಮನಕ್ಕೆ ಬಾರದಂತೆ 22 ಗ್ರಾಂ ತೂಕದ 2 ಚಿನ್ನದ ಸರಗಳನ್ನು ಕದ್ದೊಯ್ದಿದ್ದರು. ಈ ಬಗ್ಗೆ ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ […]

ಮಡಿಕೇರಿ ದಸರಾ ಜನೋತ್ಸವ 2025 – ಮಂಗಳವಾರದಿಂದ ಗಾಂಧಿ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು – ಇಲ್ಲಿದೆ ನೋಡಿ ಕಾರ್ಯಕ್ರಮಗಳ ಪಟ್ಟಿ

ಮಡಿಕೇರಿ : ಮಡಿಕೇರಿ ದಸರಾ- ಜನೋತ್ಸವ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹತ್ತು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಲಿದೆ. ಮಡಿಕೇರಿ ನಗರ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ತಾ.23ರಿಂದ ಅಕ್ಟೋಬರ್ 2ರವರೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಜರುಗಲಿವೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ತಾ.23ರಂದು ಸಂಜೆ 6ಗಂಟೆಗೆ ಭಾಗಮಂಡಲ ಜಾನ್ ಡ್ಯಾನ್ಸ್ […]

ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌ – ತಾಯಿ ಚಾಮುಂಡಿ ಬಗ್ಗೆ ಅವರು ಹೇಳಿದ್ದೇನು ಗೊತ್ತಾ..?

ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು.   ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ.  […]

ಗೋಡಾ ಹೈ – ಮೈದಾನ್‌ ಹೈ, ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ : ದಸರಾ ವೇದಿಕೆಯಲ್ಲಿ ಸಿಎಂ ಬಹಿರಂಗ ಸವಾಲು..!

ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳಿಗೆ ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ […]

ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ – ಆರತಿ ಸ್ವೀಕರಿಸಿ ಭಾವುಕರಾದ ಬಾನು ಮುಷ್ತಾಕ್..!

ಮೈಸೂರು : ನಾಡಹಬ್ಬ ಮೈಸೂರು ದಸರಾಗೆ ಚಾಲನೆ ಸಿಕ್ಕಿದೆ. ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ದಸರಾಗೆ ಚಾಲನೆ ನೀಡಿದರು. ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿದ ಬಾನು ಮುಷ್ತಾಕ್‌ ದೇವಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಮಂಗಳಾರತಿ ಸ್ವೀಕರಿಸಿದರು. ಇದರೊಂದಿಗೆ ದೇವಿಯ ಸೀರೆಯನ್ನೂ ಪಡೆದುಕೊಂಡರು. ಅರ್ಚಕರು ಹೂವಿನ ಹಾರ ನೀಡಿ ಗೌರವಿಸಿದರು. ಕೆಲ ಕ್ಷಣ ಅವರು ಭಾವುಕರಾದಂತೆ ಕಂಡುಬಂದರು. ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವದಕ್ಕೆ ಪ್ರತಾಪ್‌ ಸಿಂಹ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ದೇವಿಜೆ ಪೂಜೆ ಮಾಡುತ್ತಾರಾ? […]