ಕೊಡಗು ಜಿಲ್ಲೆಯಲ್ಲಿ ಜಾತಿ ಗಣತಿಗೆ ಹತ್ತಾರು ಅಡೆತಡೆ – ಕೈಕೊಡುತ್ತಿರುವ App – ಕೇಳುವವರಿಲ್ಲ ಸಿಬ್ಬಂದಿಯ ಗೋಳು..!

ವಿಶೇಷ ವರದಿ : ಕ-ವನ ಮಡಿಕೇರಿ : ರಾಜ್ಯ ಸರ್ಕಾರ ಹಲವು ಆಕ್ಷೇಪ, ವಿರೋಧಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ ಜಾತಿ ಗಣತಿಯನ್ನು ಆರಂಭಿಸಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಆರಂಭದಲ್ಲೇ ಹಲವು ರೀತಿಯ ಅಡೆತಗಳು ಎದುರಾಗಿದ್ದು, ಸಮೀಕ್ಷೆಯಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ತಲೆಬಿಸಿ ತಂದೊಡ್ಡಿದೆ. ಇಂದಿನಿಂದ ಸಮೀಕ್ಷೆ ಆರಂಭಿಸುವುದಕ್ಕೆ ಅಧಿಕಾರಿಗಳು ಸೂಚಿಸಿದ್ದರು. ಅದರಂತೆ ಶಿಕ್ಷಕರು ಸೇರಿದಂತೆ ಸಮೀಕ್ಷೆಗೆ ನಿಯೋಜನೆಗೊಂಡಿದ್ದ ಮಂದಿ ಬೆಳಗ್ಗೆಯೇ ತಮ್ಮ ಕಾರ್ಯಕ್ಷೇತ್ರಕ್ಕೆ ತೆರಳಿದ್ದಾರೆ. ಆದರೆ ಸರ್ವರ್ ಸಮಸ್ಯೆಯಿಂದಾಗಿ ಸಮೀಕ್ಷೆಗೆ ಬಳಸುವ ತಂತ್ರಾಂಶ ಓಪನ್ ಆಗಲೇ […]
ಮಡಿಕೇರಿ ಜನೋತ್ಸವ ದಸರಾದ ಐತಿಹ್ಯ ಅರಿಯೋಣ – ನಮ್ಮೂರ ಹಬ್ಬವನ್ನು ಸಂಭ್ರಮಿಸೋಣ

ಮಂಜಿನ ನಗರಿ ಮಡಿಕೇರಿಯು ಈಗ ತಾನೇ ಮಳೆಗಾಲದ ಏಕತಾನತೆಯಿಂದ ಮೆಲ್ಲ ಮೆಲ್ಲನೆ ಹೊರಬರುವ ಪ್ರಯತ್ನದಲ್ಲಿದೆ. ಇದನ್ನು ಸಂಭ್ರಮದಿಂದ ಸ್ವಾಗತಿಸಲು ತಯಾರಾಗಿ ನಿಂತಿದೆ ನಾಡಹಬ್ಬ ದಸರಾ ಹಬ್ಬ. ಈಗಾಗಲೇ ವಿಶ್ವ ವಿಖ್ಯಾತ ಮೈಸೂರು ದಸರಾ ಅಲಂಕಾರಗೊಂಡ ನವ ವಧುವಿನಂತೆ ಝಗ ಮಗಿಸುವ ಬೆಳಕಿನ ಅಲಂಕಾರದಲ್ಲಿ ಸಾಂಸ್ಕೃತಿಕ ಕಲರವದೊಂದಿಗೆ ಸದ್ದು ಮಾಡುತ್ತಿದೆ. ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ತನ್ನದೇ ಆದ ಐತಿಹಾಸಿಕ, ಧಾರ್ಮಿಕ, ಹಿನ್ನೆಲೆಯಲ್ಲಿ ಬೆಳೆದು ಬಂದು ವರ್ಷದಿಂದ ವರ್ಷಕ್ಕೆ ವಿಭಿನ್ನವಾಗಿ ಆಚರಿಸಲ್ಪಡುತ್ತಿರುವ ನಾಡ ಉತ್ಸವ. ಮೈಸೂರು ದಸರಾ […]
ಮಡಿಕೇರಿ ಜನೋತ್ಸವ ದಸರಾ : ‘ಬಹುಭಾಷಾ ಕವಿಗೋಷ್ಠಿ’ ಸೆ.25ಕ್ಕೆ – ರಾಜ್ಯದ 77 ಕವಿಗಳಿಂದ ಕವನ ವಾಚನ

ಮಡಿಕೇರಿ : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ‘ಬಹುಭಾಷಾ ಕವಿ ಗೋಷ್ಠಿ’ ಸೆ.25 ರಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಿನ ಪೂರ್ತಿ ನಡೆಯುವ ಮೂಲಕ, ಸಾಹಿತ್ಯ ಪ್ರೇಮಿಗಳಿಗೆ ರಸದೌತಣ ಉಣಬಡಿಸಲಿದೆಯೆಂದು ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಉಜ್ವಲ್ ರಂಜಿತ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 9 ಗಾಂಧಿ ಮೈದಾನ ರಸ್ತೆಯ ಬಳಿಯಲ್ಲಿರುವ, ಡಿಸಿಸಿ ಬ್ಯಾಂಕ್ ಮುಂಭಾಗದ ಕುವೆಂಪು ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕವಿಗೋಷ್ಠಿಯ ಅಧ್ಯಕ್ಷೆ, ಸಾಹಿತಿ ಸುನೀತಾ […]
ವಿಜ್ಞಾನ ಮತ್ತು ಸೃಜನಾತ್ಮಕತೆಯ ಕಲೆ ಛಾಯಾಗ್ರಹಣ – ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ […]