ನಾಳೆ(ಸೆ. 28) ಮಡಿಕೇರಿಯಲ್ಲಿ ರಂಗೇರಲಿದೆ ಮಹಿಳೆಯರ ಸಂಭ್ರಮ

ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮಂಜಿನ ನಗರಿ ಮಡಿಕೇರಿಯಲ್ಲಿ 8ನೇ ವರ್ಷದ ಮಹಿಳಾ ದಸರಾ ಏರ್ಪಡಿಸಲಾಗಿದ್ದು ತಾ. 28ರ ಭಾನುವಾರದಂದು ನಡೆಯಲಿದೆ. ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟನೆ ಮಾಡಲಿದ್ದಾರೆ. ನಗರ ಸಭೆ ಹಾಗೂ ನಗರ […]
ದಸರಾ ಕ್ರೀಡಾಕೂಟಕ್ಕೆ ಮಳೆ ಅಡ್ಡಿ – ಕಬಡ್ಡಿ ಪಂದ್ಯಾವಳಿ ಮುಂದೂಡಿಕೆ: ಅಧ್ಯಕ್ಷ ಪ್ರದೀಪ್ ಕರ್ಕೇರ

ಮಡಿಕೇರಿ : ಮಡಿಕೇರಿ ಜನೋತ್ಸವ ದಸರಾ ಕ್ರೀಡಾ ಸಮಿತಿ ವತಿಯಿಂದ ಸೆ.28ರಂದು ನಡೆಯಬೇಕಿದ್ದ ಕಬಡ್ಡಿ ಪಂದ್ಯಾವಳಿಯನ್ನು ಮುಂದೂಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೇರ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈ ಬಾರಿಯ ದಸರಾ ಕ್ರೀಡಾಕೂಟಕ್ಕೆ ವಿವಿಧ ರೀತಿಯಲ್ಲಿ ಸಮಸ್ಯೆಯಾಗುತ್ತಿದೆ. ಹಲವು ಸ್ಪರ್ಧೆಗಳನ್ನು ಮಳೆಯ ನಡುವೆಯೇ ನಡೆಸಿದ್ದೇವೆ. ಆದರೆ ಕಬಡ್ಡಿ ಪಂದ್ಯಾವಳಿಗೆ ಹೊರ ಜಿಲ್ಲೆಗಳಿಂದಲೂ ತಂಡಗಳು ಆಗಮಿಸಲಿದ್ದು, ಎಲ್ಲಾ ಆಟಗಾರರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಬೇಕಿದೆ. ಮಳೆಯ ನಡುವೆ ಪಂದ್ಯಾವಳಿ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಮಿತಿ […]