ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ: ಎ.ಎಸ್.ಪೊನ್ನಣ್ಣ

ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಹಾಗೂ ಸರ್ಕಾರದ ಕಾರ್ಯಕ್ರಮ ರೂಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆ ದಿಸೆಯಲ್ಲಿ ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕರು ಸಾಮಾಜಿಕ  ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿದ್ದು, ರಾಜಕೀಯ ಪ್ರೇರಿತವಾಗಿದೆ ಎಂದರು. […]

ಜಾನಪದ ಸಂಸ್ಕೃತಿ, ಕಲೆ ಉಳಿಸಿ ಬೆಳೆಸಿ: ಎ.ಎಎಸ್.ಪೊನ್ನಣ್ಣ

ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಆ ನಿಟ್ಟಿನಲ್ಲಿ ದಸರಾ ಸಂಸ್ಕøತಿ ಮತ್ತು ಜಾನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ..ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಮಳೆಯ ನಡುವೆಯೂ ದಸರಾಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು. ನಾಡಹಬ್ಬ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾಗೆ ಹೆಚ್ಚಿನ ಸ್ಪಂದನೆ ದೊರೆತಿರುವುದು ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಸಾಂಸ್ಕøತಿಕ ಹಿನ್ನೆಲೆ ಇರುವ ತಮ್ಮದೇ ಆಚರಣೆ […]

ತ್ರಿನೇತ್ರ ವಾಹನ ಮಾಲೀಕರ ಸಂಘದ ವತಿಯಿಂದ 32ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ

ಮೂರ್ನಾಡು : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ 32ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ ಅ.01ರಂದು ಸರ್ಕಾರಿ ಪ್ರೌಢಶಾಲೆ ಮೈದಾನ(ನಾಡ್‌ಮಂದ್‌)ದಲ್ಲಿ ನಡೆಯಲಿದೆ. ಅಂದು ಸಂಜೆ 06 ಗಂಟೆಗೆ ಸಂಘದ ಅಧ್ಯಕ್ಷ ಕರವಂಡ ಸಜನ್‌ ಗಣಪತಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.‌ ಕುಶನ್‌ ರೈ, ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯ ನಿರೀಕ್ಷಕ ಚಂದ್ರಶೇಖರ್‌, ಗ್ರಾಮ ಆಡಳಿತಾಧಿಕಾರಿ ಅಕ್ಷತಾ ಶೆಟ್ಟಿ, ಪಿಡಿಒ ಚಂದ್ರಮೌಳಿ, ವಕೀಲ ಬಿ.ಎ. […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್

Kodagu rain

ಮಡಿಕೇರಿ:- ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.48 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2794.41 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2793.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.55 ಮಿ.ಮೀ. ಕಳೆದ ವರ್ಷ ಇದೇ ದಿನ 0.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4241.66 ಮಿ.ಮೀ, ಕಳೆದ ವರ್ಷ ಇದೇ […]