ಸಮಿತಿಯವರ ಸಂಬಂಧಿಕರೇ ತೀರ್ಪುಗಾರರು – ಕರವಲೆ ಭಗವತಿ ದೇವಾಲಯ ಸಮಿತಿ ಗಂಭೀರ ಆರೋಪ..!

ಮಡಿಕೇರಿ : ಮಡಿಕೇರಿ ದಸರಾ ಶೋಭಾಯಾತ್ರೆಯ ಬಹುಮಾನ ವಿತರಣೆ ಸಂದರ್ಭ ಉಂಟಾದ ಗಲಭೆ ಸಂಬಂಧ ದಶಮಂಟಪ ಸಮಿತಿ ವಿರುದ್ಧ ಕರವಲೆ ಭಗವತಿ ದೇವಾಲಯ ಸಮಿತಿಯವರು ಗಂಭೀರ ಆರೋಪ ಮಾಡಿದ್ದಾರೆ. ಪ್ರತಿ ಬಾರಿ ದಸರಾ ಶೋಭಾಯಾತ್ರೆಯ ಫಲಿತಾಂಶದಲ್ಲಿ ಇದೇ ರೀತಿ ಆಗುತ್ತಿದೆ. ಸಮಿತಿಯವರು ಅವರಿಗೆ ಬೇಕಾದವರನ್ನು ತೀರ್ಪುಗಾರರನ್ನಾಗಿ ಮಾಡಿಕೊಳ್ಳುತ್ತಾರೆ. ಈ ಬಾರಿ ಸಮಿತಿಯಲ್ಲಿರುವ ಸಂಬಂಧಿಕರನ್ನೇ ತೀರ್ಪುಗಾರರನ್ನಾಗಿ ಮಾಡಿಕೊಂಡಿದ್ದರೆಂದು ಕರವಲೆ ಭಗವತಿ ದೇವಾಲಯ ಸಮಿತಿ ಅಧ್ಯಕ್ಷ ಕಾರ್ಯಪ್ಪ ಆರೋಪಿಸಿದ್ದಾರೆ. ಈ ಬಗ್ಗೆ ಕೂರ್ಗ್ ಬಝ್ ಜೊತೆ ಮಾತನಾಡಿದ ಅವರು, ಈ […]
ರಶ್ಮಿಕಾ, ವಿಜಯ್ ದೇವರಕೊಂಡ ನಿಶ್ಚಿತಾರ್ಥ? – ಹೊಸ ಜೀವನದತ್ತ ಜೋಡಿಹಕ್ಕಿ ಹೆಜ್ಜೆ..!

ಬೆಂಗಳೂರು : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಹೊಸ ಜೀವನಕ್ಕೆ ಹೆಜ್ಜೆಯಿಡಲು ಕೊಡಗಿನ ಸುಂದರಿ ಸಿದ್ಧರಾಗುತ್ತಿದ್ದಾರೆಂಬ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರತಿಷ್ಠಿತ ಮಾಧ್ಯಮಗಳು ವರದಿ ಪ್ರಕಟಿಸಿದ್ದು, ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆಂದು ವರದಿ ಭಿತ್ತರಿಸಿದೆ. ಆದರೆ ಈ ಬಗ್ಗೆ ಇಬ್ಬರು ತಾರೆಯರ ಕಡೆಯವರು ಯಾರೂ ಕೂಡಾ ಅಧಿಕೃತ ಹೇಳಿಕೆ […]
ದಸರಾದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ…

ಮಡಿಕೇರಿ : ದಸರಾದ ರಾತ್ರಿ ಬಿದ್ದು ಸಿಕ್ಕಿದ ಚಿನ್ನದ ಕರಿಮಣಿ ಸರವನ್ನು ವ್ಯಕ್ತಿಯೊಬ್ಬರ ಅದರ ಮಾಲೀಕರಿಗೆ ನೀಡಿ ಪ್ರಾಮಾಣಿಕತೆ ತೋರಿದ್ದಾರೆ. ಮಡಿಕೇರಿ ನಿವಾಸಿ ಕೊಂಗಂಡ ಎಸ್. ದೇವಯ್ಯ ಎಂಬವರ ಪತ್ನಿ ದಸರಾ ವೀಕ್ಷಣೆಗೆ ಬಂದಿದ್ದ ಸಂದರ್ಭ ತಾವು ಧರಿಸಿದ್ದ ಕರಿಮಣಿ ಸವರನ್ನು ಕಳೆದುಕೊಂಡಿದ್ದರು. ಇದು ಕೋಟೆ ಮಹಾಗಣಪತಿ ದೇವಾಲಯ ಸಮಿತಿ ಸದಸ್ಯ ಪುನೀತ್ ಎಂಬವರಿಗೆ ಸಿಕ್ಕಿದೆ. ಅದನ್ನು ಅವರು ಪೊಲೀಸರಿಗೆ ನೀಡಿದ್ದರು. ಈ ಬಗ್ಗೆ ಸಾರ್ವಜನಿಕ ಪ್ರಕಟಣೆ ನೀಡಲಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ದೇವಯ್ಯ ಹಾಗೂ […]
ಚೆಟ್ಟಳ್ಳಿ ಕಾಫಿ ಸಂಶೋಧನಾ ಉಪಕೇಂದ್ರದಲ್ಲಿ ಉದ್ಯೋಗಾವಕಾಶ – ಇಲ್ಲಿದೆ ನೋಡಿ ಮಾಹಿತಿ

ಚೆಟ್ಟಳ್ಳಿ ಕಾಫಿ ಬೋರ್ಡ್ನಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; ಪದವೀಧರರು ಅರ್ಹರು * ಕೊಡಗು ಜಿಲ್ಲೆಯ ಚೆಟ್ಟಳ್ಳಿಯಲ್ಲಿ ಕಾಫಿ ಬೋರ್ಡ್ ಗೆ ಯುವ ವೃತ್ತಿಪರ ಹುದ್ದೆಗೆ ನೇರ ಸಂದರ್ಶನದ ಮೂಲಕ ಅರ್ಹ ಎಂ.ಎಸ್ಸಿ ಪದವೀಧರರನ್ನು ಆಹ್ವಾನಿಸಲಾಗಿದೆ. ಮಾಸಿಕ 21,000 ರೂ. ಸಂಬಳದ ಈ ಅವಕಾಶ, ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸೂಕ್ತವಾಗಿದೆ. ವಯಸ್ಸಿನ ಮಿತಿ 18-35 ವರ್ಷ ಎಂದು ನಿಗದಿಪಡಿಸಲಾಗಿದೆ. ಆಸಕ್ತ ಅರ್ಹ .ಎಸ್ಸಿ ಪದವೀಧರರು ಅಕ್ಟೋಬರ್ 08 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಕೊಡಗು ಜಿಲ್ಲೆಯ ಚೆಟ್ಟಳ್ಳಿಯಲ್ಲಿರುವ […]
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ

ಮಡಿಕೇರಿ : ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ (Coorg Women Coffee Awareness Body – CWCAB) ವತಿಯಿಂದ ಅಂತಾರಾಷ್ಟ್ರೀಯ ಕಾಫಿ ದಿನವನ್ನು ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KOIMS)ಬೋಧಕ ಆಸ್ಪತ್ರೆಯ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಫಿ ಉತ್ಪಾದನೆ ಹೆಚ್ಚಿಸುವ ಗುರಿ ಹಾಗೂ ಆರೋಗ್ಯದ ದೃಷ್ಟಿಯಿಂದ ಕಾಫಿ ಸೇವನೆಯ ಮಹತ್ವದ ಬಗ್ಗೆ ಗಣ್ಯರು ಮಾತನಾಡಿದರು. ಮುಖ್ಯ ಭಾಷಣ ಮಾಡಿದ ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ (CPA)ನ ಮಾಜಿ ಅಧ್ಯಕ್ಷ ಎನ್.ಎ. ಅಪ್ಪಯ್ಯ, ಭಾರತೀಯ ಕಾಫಿಯನ್ನು […]