ಮೊಬೈಲ್ ಗೀಳನ್ನು ಬದಿಗೊತ್ತಿ ಸಾಮಾಜಿಕ ಮೌಲ್ಯಗಳಿಗೆ ಬೆಲೆ ತೆತ್ತು ಸಮಾಜ ಸೇವೆಗೆ ಮುಂದಾಗಿ: ಕೌಶಿ ಕಾವೇರಮ್ಮ

ವಿರಾಜಪೇಟೆ: ಕಾಲೇಜು ಶಿಕ್ಷಣ ಪಠ್ಯೇತರ ಚಟುವಟಿಕೆಗಳನ್ನು ತಿಳಿಸಿಕೊಡುತ್ತದೆ. ಪಾಠ ಪ್ರವಚನದೊಂದಿಗೆ ಸಾಮಾಜಿಕ ಮೌಲ್ಯಗಳಿಗೆ ಗೌರವಸೂಚಿಸಿ ಉತ್ತಮ ಸಮಾಜ ರೂಪಿಸುವಲ್ಲಿ ವಿದ್ಯಾರ್ಥಿಗಳು ಮುಂದಾಗುವಂತೆ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅವರು ಹೇಳಿದರು. ಕಾಲೇಜು ಶಿಕ್ಷಣ ಇಲಾಖೆ, ಕೊಡಗು ವಿಶ್ವವಿದ್ಯಾನಿಲಯ, ಕಾವೇರಿ ಪದವಿ ಕಾಲೇಜು ವಿರಾಜಪೇಟೆ ಆಶ್ರಯದಲ್ಲಿ ಕಡಂಗ ಅರಪಟ್ಟು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಹೂವಿನ ಗಿಡಕ್ಕೆ ನೀರು […]