ಬಿಗ್‌ಬಾಸ್‌ಗೆ ಬಿಗ್ ಶಾಕ್ ಕೊಟ್ಟ ಸರ್ಕಾರ – 12ನೇ ಆವೃತ್ತಿಯ ದೊಡ್ಡ ಮನೆಗೆ ಬೀಗ ಜಡಿದ ಜಿಲ್ಲಾಡಳಿತ..!

ಬೆಂಗಳೂರು : ಬಿಗ್‌ಬಾಸ್ ಕನ್ನಡ ಸೀಸನ್ 12ನೇ ಆವೃತ್ತಿ ಆರಂಭವಾದ ಎರಡನೇ ವಾರದಲ್ಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದರ್ ತೇಜಸ್ವಿನಿ ಸಮ್ಮುಖದಲ್ಲಿ ಇಂದು ಸಂಜೆ ಆಗಮಿಸಿದ ಅಧಿಕಾರಿಗಳು ಪೊಲೀಸ್ ಭದ್ರತೆಯಲ್ಲಿ ಬೀಗ ಹಾಕಿದ್ದಾರೆ. ಜೊತೆಗೆ 7 ಗಂಟೆಯೊಳಗೆ ಒಳಗಿರುವ ಎಲ್ಲರನ್ನೂ ಖಾಲಿ ಮಾಡುವಂತೆ ಸೂಚಿಸಿದ್ದರು. ಅದರಂತೆ ಬಿಗ್‌ಬಾಸ್ ಟೀಂ ಎಲ್ಲಾ ಸ್ಪರ್ಧಿಗಳ ಸ್ಥಳಾಂತರಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕಾರಣ ಏನು..? ಬಿಗ್‌ಬಾಸ್ ಶೂಟಿಂಗ್ ಆಗುತ್ತಿರುವ […]
Breaking News : ಮನೆ ಮನೆ ಸಮೀಕ್ಷೆ – ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ ರಜೆ ಘೋಷಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ ಮಾಡಲಾಗಿದೆ. 19ರ ಒಳಗೆ ಸಮೀಕ್ಷೆ ಮುಗಿಯಲಿದೆ ಅಂತ ಶಿಕ್ಷಕರ ಸಂಘದವರು ತಿಳಿಸಿದ್ದಾರೆ. ಈ ಅವಧಿಯಲ್ಲಿ ನಷ್ಟವಾಗುವ ತರಗತಿಗಳನ್ನು ವಿಶೇಷ ಬೋಧನಾ ತರಗತಿಗಳ ಮೂಲಕ ಪೂರ್ಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ […]
ಸೂರಿಗಾಗಿ ಮರವೇರಿ ಪ್ರತಿಭಟಿಸಿದ್ದ ಕೊಡಗಿನ ಆದಿವಾಸಿ ಮಹಿಳೆ ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ..!

ಬೆಂಗಳೂರು : ಕೊಡಗಿನ ಆದಿವಾಸಿ ಮಹಿಳೆ ಜಿ.ಕೆ. ಮುತ್ತಮ್ಮ ಸೇರಿ ರಾಜ್ಯ ವಿವಿಧೆಡೆಯ 05 ಮಂದಿ ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಕೊಡಗಿನ ದಿಡ್ಡಳ್ಳಿಯಲ್ಲಿ ಆದಿವಾಸಿಗಳ ವಸತಿಗಾಗಿ ಹೋರಾಟದ ಸಂದರ್ಭ ಮುಂಚೂಣಿಯಲ್ಲಿದ್ದ ಮುತ್ತಮ್ಮ ವಿವಿಧ ರೀತಿಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವ್ಯವಸ್ಥೆ ವಿರುದ್ಧ ಮರವೇರಿ ಪ್ರತಿಭಟಿಸಿದ್ದು ಮಾತ್ರವಲ್ಲ, ಅರೆಬೆತ್ತಲೆ ಪ್ರತಿಭಟನೆ ಮಾಡಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ […]
ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ

ವಿರಾಜಪೇಟೆ :ಪ್ರತಿಯೊಬ್ಬರು ಕಣ್ಣುಗಳ ಆರೋಗ್ಯದ ಕಡೆಗೆ ಗಮನಹರಿಸಬೇಕೆಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ರವರು ಅಭಿಪ್ರಾಯಪಟ್ಟರು. ಅವರು ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ವಿರಾಜಪೇಟೆಯ ಡಾ. ಅಗರ್ವಾಲ್ಸ್ ಕ್ಲಿನಿಕ್ ನ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡುತ್ತಾ ಮಾತನಾಡುತ್ತಿದ್ದರು. ಕಣ್ಣು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು ಜೀವನದುದ್ದಕ್ಕೂ ಕಣ್ಣುಗಳ ಆರೋಗ್ಯದ ಕಡೆಗೆ […]
KMA ವಿಶೇಷ ಪ್ರತಿಭಾ ಪುರಸ್ಕಾರ 2025 – ರೈಹಾನ, ದೇವಿಪ್ರಿಯ ಸೇರಿ ಆರು ವಿದ್ಯಾರ್ಥಿಗಳು ಆಯ್ಕೆ

ವಿರಾಜಪೇಟೆ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಾಯೋಜಕರ ನೆರವಿನಿಂದ ನೀಡಲಾಗುವ ಈ ಸಾಲಿನ ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರ-2025ಕ್ಕೆ ಜಿಲ್ಲೆಯ ಒಟ್ಟು ಆರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ ಎಂದು ಕೆ.ಎಂ.ಎ. ತಿಳಿಸಿದೆ. ಕೆ.ಎಂ.ಎ. ಅಧ್ಯಕ್ಷ ಡಿ. ಹೆಚ್. ಸೂಫಿ ಹಾಜಿ ತಮ್ಮ ಪೋಷಕರಾದ ದಿವಂಗತ ಡಿ.ಪಿ. ಹುಸೈನಾರ್ ಹಾಜಿ ಮತ್ತು ಆಮೀನಾ ಸ್ಮರಣಾರ್ಥಕವಾಗಿ SSLC ಪರೀಕ್ಷೆಯಲ್ಲಿ ಸರಕಾರಿ ಶಾಲೆಯಲ್ಲಿ ಓದಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ […]
ಕಾವೇರಿ ಪಿಯು ಕಾಲೇಜು ವೀರಾಜಪೇಟೆ – ʼನಶಾ ಮುಕ್ತ ಭಾರತ ಅಭಿಯಾನʼ ವಿಶೇಷ ಶಿಬಿರ ಸಂಪನ್ನ

ವೀರಾಜಪೇಟೆ : ಇಲ್ಲಿನ ಕಾವೇರಿ ಪದವಿ ಪೂರ್ವ ಕಾಲೇಜು ವತಿಯಿಂದ ಎನ್‌ಎಸ್‌ಎಸ್ ವಿಶೇಷ ಶಿಬಿರ ಅಮ್ಮತ್ತಿಯಲ್ಲಿ ಇತ್ತೀಚೆಗೆ ನಡೆಯಿತು. ʼನಶಾ ಮುಕ್ತ ಭಾರತ ಅಭಿಯಾನʼ ಭಾಗವಾಗಿ ನಡೆದ ವಿಶೇಷ ಶಿಬಿರದಲ್ಲಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಶಿಬಿರದ ಸಮಾರೋಪ ಸಮಾರಂಭ ಅಮ್ಮತ್ತಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಎ.ಡಿ. ಅಕ್ಕಮ್ಮ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಶಿಸ್ತು, ಸಮಯ ಪಾಲನೆ, […]