ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

NSS student

ಸ್ವಚ್ಛತೆ ಹಾಗೂ ನೈರ್ಮಲ್ಯದ ಪಾಠಗಳನ್ನು ಯಾರಿಂದಲೂ ಬೋಧಿಸಿ ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ ಸ್ವಚ್ಛತೆ ಎಂಬುದು ಪ್ರತಿಯೊಬ್ಬರನ್ನು ಸ್ವ ಇಚ್ಛೆಯಿಂದ ಬಂದಾಗ ಸ್ವಚ್ಛ ಪರಿಸರ ನಿರ್ಮಿಸಲು ಸಾಧ್ಯ ಎಂದು ನರಿಯಂಡಡ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಭಿಪ್ರಾಯಪಟ್ಟರು . ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಪಟ್ಟು ಕಡಂಗದಲ್ಲಿ ನಡೆಯುತ್ತಿರುವ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಐದನೇ ದಿನ ನಡೆದ ಗ್ರಾಮ ಸ್ವಚ್ಛತಾ […]

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ವಿರಾಜಪೇಟೆ ಶಾಖಾ ವ್ಯಾಪ್ತಿಯ ಹೆಗ್ಗಳ ಮಾರ್ಗದಲ್ಲಿ ಅಕ್ಟೋಬರ್, 09 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆ ವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಆರ್ಜಿ, ಬೇಟೋಳಿ, ಹೆಗ್ಗಳ, ರಾಮನಗರ, ಪೆರುಂಬಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಲಂಚಕ್ಕೆ ಕೈವೊಡ್ಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತ ಬಲೆಗೆ..!

ಶನಿವಾರಸಂತೆ : ಲೋಕಾಯುಕ್ತ ಬಲೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಿದ್ದಿದ್ದಾರೆ. ಸೋಮವಾರಪೇಟೆ ತಾಲೂಕಿನ ಹಂಡ್ಲಿ ಗ್ರಾಪಂ ಅಧ್ಯಕ್ಷೆ ಸುಧಾ ಹಿರೇಶ್‌ ಎಂಬವರೇ ಲಂಚ ಸ್ವೀಕಾರ ವೇಳೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಜನಪ್ರತಿನಿಧಿ. ಕಾಮಗಾರಿಯೊಂದರ ಸಂಬಂಧ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಗುತ್ತಿಗೆದಾರ ಭರತ್‌ ಎಂಬವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು 25 ಸಾವಿರ ರೂ. ಲಂಚ ಪಡೆಯುವ ವೇಳೆ ಅಧ್ಯಕ್ಷೆಯನ್ನು ರೆಡ್‌ ಹ್ಯಾಂಡ್‌ ಆಗಿ […]

ಎಳೆಯ ಮಕ್ಕಳನ್ನು ಬಳಸಿ ಭಿಕ್ಷಾಟನೆ – ಕ್ರಮಕ್ಕೆ ಸಾರ್ವಜನಿಕರ ಆಗ್ರಹ…

ಕುಶಾಲನಗರ : ಕೊಡಗು ಜಿಲ್ಲೆಯ ಕುಶಾಲನಗರ ವ್ಯಾಪ್ತಿಯಲ್ಲಿ ಎಳೆಯ ಮಕ್ಕಳನ್ನು ಬಳಸಿಕೊಂಡು ಕೆಲವು ಮಹಿಳೆಯರ ತಂಡ ಭಿಕ್ಷಾಟನೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಕೆಲವು ದಿನದಿಂದ ಇಂಥ ಚಟುವಟಿಕೆ ಹೆಚ್ಚಾಗಿದ್ದು, ಮಹಿಳೆಯರ ತಂಡ ವಿವಿಧ ಕಡೆಗಳಲ್ಲಿ ತೆರಳಿ ಭಿಕ್ಷಾಟಣೆಯಲ್ಲಿ ತೊಡಗಿದೆ. ಮಹಿಳೆಯರ ಪೂರ್ವಾಪರದ ಬಗ್ಗೆ ಕೆಲವರು ವಿಚಾರಿಸಲು ಮುಂದಾದಾಗ ತಪ್ಪಿಸಿಕೊಂಡು ಓಡಿದ್ದಾರೆ. ಹಲವು ಮಹಿಳೆಯರು ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಿಸಿಲಿನಲ್ಲಿ ತಿರುಗಾಡುತ್ತಿದ್ದಾರೆ. ಅವರ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ. ಹೀಗಾಗಿ ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]